More

    ಬಿಜೆಪಿಯಿಂದ ಕೆಟ್ಟ ಸಂಪ್ರದಾಯಕ್ಕೆ ನಾಂದಿ

    ಬಾಗಲಕೋಟೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿದ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಸ್ವತಂತ್ರ ಭಾರತದಲ್ಲಿ ಕೇಂದ್ರ ಸರ್ಕಾರವೊಂದು ಮೊದಲ ಬಾರಿಗೆ ಸಂವಿಧಾನಾತ್ಮಕ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಪಕ್ಷ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಐಟಿ, ಇಡಿ, ಸಿಬಿಐಗಳನ್ನು ಸಮರ್ಥವಾಗಿ ಎದುರಿಸಲಿದೆ ಎಂದರು.

    ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ವಿಚಲಿತಗೊಳಿಸುವ ಉದ್ದೇಶದಿಂದ ಸಿಬಿಐ ದಾಳಿ ಮಾಡಿಸಿದ್ದಾರೆ. ಈಗಾಗಲೇ ಡಿಕೆಶಿ ಮೇಲೆ ಇಡಿ, ಐಟಿ, ಸಿಬಿಐ ದಾಳಿ ನಡೆಸಿ ವಿನಾಕಾರಣ ಅವರನ್ನು ಕಸ್ಟಡಿಯಲ್ಲಿ ಇಟ್ಟಿದ್ದರು. ಇದನ್ನು ಇಡೀ ದೇಶದ ಜನರು ನೋಡಿದ್ದಾರೆ. ಈಗ ಅತ್ಯಂತ ಮಹತ್ವದ ಉಪಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೆ ದುಸ್ತರ ಅನ್ನಿಸುತ್ತಿದೆ. ಇದರಿಂದ ಕಾಂಗ್ರೆಸ್‌ನವರನ್ನು ಅಂಜಿಸುವುದಕ್ಕೆ ಕೈಹಾಕಿದ್ದು, ಇದರಲ್ಲಿ ಕಮಲ ಪಡೆ ಯಶಸ್ವಿಯಾಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕಪಾಠವನ್ನು ಕಲಿಸಲಿದ್ದಾರೆ ಎಂದು ಎಸ್.ಆರ್. ಪಾಟೀಲ ಭವಿಷ್ಯ ನುಡಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts