More

    120 ಕೋಟಿ ರೂ. ಮೊತ್ತದ ಕಾಮಗಾರಿಗೆ ಅನುಮೋದನೆ

    ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ 2021-22 ನೇ ಸಾಲಿಗೆ 120 ಕೋಟಿ ರೂ. ವೆಚ್ಚದಲ್ಲಿ ನವನಗರದಲ್ಲಿ ಹೊಸ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಗುರುವಾರ ನಡೆದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಬಿಟಿಡಿಎ ಅಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.

    ನಗರದ ಬಿಟಿಡಿಎ ಸಭಾಭವನದಲ್ಲಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಸಂದರ್ಭದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವನಗರದಲ್ಲಿ 26 ವಿವಿಧ ಕಾಮಗಾರಿಗೆ ಕೆಬಿಜೆಎನ್‌ಎಲ್‌ದಲ್ಲಿ ಕ್ರಿಯಾಯೋಜನೆ ರೂಪಿಸಿ ನೀಡಿತ್ತು. ಬಿಟಿಡಿಎ ಬೋರ್ಡ್ ಸಭೆಯಲ್ಲಿ ಅದಕ್ಕೆ ಅನುಮೋದನೆ ನೀಡಲಾಗಿದೆ. 120 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆಗೆ ಶೀಘ್ರದಲ್ಲಿ ಚಾಲನೆ ದೊರೆಯಲಿದೆ ಎಂದರು.

    ಇನ್ನು ನವನಗರದಲ್ಲಿ ಕುಟುಂಬ ಮತ್ತು ಕಾರ್ಮಿಕ ನ್ಯಾಯಾಲಯಕ್ಕೆ ಒಂದು ಎಕರೆ ಜಾಗ 2015 ರಲ್ಲಿ ನೀಡಲಾಗಿತ್ತು. ಜಾಗ ಕಡಿಮೆಯಾಗಲಿದೆ, ಇನ್ನಷ್ಟು ಜಾಗ ನೀಡಬೇಕು ಎಂದು ನ್ಯಾಯಾಧೀಶರು ಮನವಿ ಮಾಡಿದ್ದರು. ಅದರಂತೆ ಮೂರು ಎಕರೆ ಜಾಗ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಇನ್ನೂ ಅಂಗವಿಕಲರ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಲಾಗಿದೆ. ಪಶು ಸಂಗೋಪನೆ ಇಲಾಖೆಯ ಸಂಶೋಧನಾ ಕೇಂದ್ರಕ್ಕೆ ನಿವೇಶನ ನೀಡಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಮೂರು ಜಿಲ್ಲೆ ಒಳಗೊಂಡಂತೆ ಈ ಪಶು ಸಂಗೋಪನಾ ಇಲಾಖೆಯ ಸಂಶೋಧನಾ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಇದರಿಂದ ರೈತರ ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದರು.

    ಬಿಟಿಡಿಎದಲ್ಲಿರುವ ಕಾರ್ಪಸ್ ಂಡ್ ಹಣದ ಬಡ್ಡಿ ರೂಪದಲ್ಲಿ ಬರುವ 1.30 ಕೋಟಿ ರೂ. ವೆಚ್ಚದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಗಿದೆ ಎಂದರು.

    ಬಿಟಿಡಿಎ ಸದಸ್ಯ ಮೋಹನ ನಾಡಗೌಡ, ಕುಮಾರ ಯಳ್ಳಿಗುತ್ತಿ, ಪುನರ್ವಸತಿ ಅಧಿಕಾರಿ ಗಣಪತಿ ಪಾಟೀಲ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ ಇತರರಿದ್ದರು.

    1529 ಜನ ಸಂತ್ರಸ್ತರಿಗೆ ಹಕ್ಕುಪತ್ರ
    ಬಿಟಿಡಿಎ ಅಧಿಕಾರ ವಹಿಸಿಕೊಂಡ ನಂತರ ಇದುವರೆಗೆ ಹತ್ತು ಬಾರಿ ನಗರದ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಪತ್ರವನ್ನು ವಿತರಿಸಲಾಗಿದೆ. ಒಟ್ಟು 1529 ಜನ ಸಂತ್ರಸ್ತರಿಗೆ ಹಕ್ಕುಪತ್ರವನ್ನು ನೀಡಲಾಗಿದೆ. ಇನ್ನೂ ಕೋವಿಡ್ ಸಂದರ್ಭದಲ್ಲಿ 278 ಜನ ಸಂತ್ರಸ್ತರಿಗೆ ಮನೆಗೆ ತೆರಳಿ ಹಕ್ಕು ಪತ್ರ ನೀಡಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts