ಸಿದ್ದರಾಮಯ್ಯ ಕಾಂಗ್ರೆಸ್​ನ ಅತೃಪ್ತ ಆತ್ಮಗಳ ನಾಯಕ: ಈಶ್ವರಪ್ಪ

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ನ ಅತೃಪ್ತ ಆತ್ಮಗಳ ನಾಯಕ ಎಂದು ಬಿಜೆಪಿ ಶಾಸಕ ಕೆ.ಎಸ್​. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಕಳೆದ, ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದರು. ಅವರಿಗೆ ಸೋಲಿನ ಹೊಟ್ಟೆ ಉರಿ ಇನ್ನೂ ಕಡಿಮೆಯಾಗಿಲ್ಲ. ಸಿದ್ದರಾಮಯ್ಯ ತಾವು ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿದ್ದಾರೆ. ಹಾಗಾಗಿ ಸರ್ಕಾರದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ಗೂಂಡಾಗಳಿಗೆ ಏನೂ ವ್ಯತ್ಯಾಸವಿಲ್ಲ. ಅವರು ಮುಖ್ಯಮಂತ್ರಿಯಾಗಲು ಯೋಗ್ಯರಲ್ಲ. ರಾಜ್ಯದಲ್ಲಿ ಈ ಹಿಂದೆ 22 ಹಿಂದು ಕಾರ್ಯಕರ್ತರ ಹತ್ಯೆ ಆಗಿತ್ತು. ಆಗ ಎಚ್​ಡಿಕೆ ಮೌನವಾಗಿದ್ದರು. ಸಿಎಂ ತಮ್ಮ ಹೇಳಿಕೆಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.