More

    ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ

    ಬಾಗಲಕೋಟೆ: ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಮುರುಗೇಶ ಹುಲ್ಲಳ್ಳಿ ಮೇಲೆ ನಡೆದ ಹಲ್ಲೆ ಖಂಡಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ನೌಕರರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿದ ನೌಕರರ ಹಲ್ಲೆಕೋರರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಜಿಲ್ಲೆಯ ಹುನಗುಂದ ತಾಲೂಕಿನ ಮರೋಳ ಗ್ರಾಮದ ಬಸವನಗುಡಿ ಹಳ್ಳದ ಹತ್ತಿರ ಬಸ್ ಅಡ್ಡಗಟ್ಟಿ ಕೆಲವು ದುಷ್ಕರ್ಮಿಗಳು ನಿರ್ವಾಹಕ ಮುರುಗೇಶ ಹುಲ್ಲಳ್ಳಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ದುಷ್ಕರ್ಮಿಗಳು ಚಲಿಸುತ್ತಿದ್ದ ಬಸ್ ನಿಲ್ಲಿಸಿ ನಿರ್ವಾಹಕನ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ತಲ್ಲಣ ಸೃಷ್ಟಿ ಮಾಡಿದೆ. ಚಾಲಕರು, ನಿರ್ವಾಹಕರು ಭಯದಲ್ಲಿ ಸೇವೆ ಸಲ್ಲಿಸುವಂತಾಗಿದೆ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಹಲ್ಲೆ ಮಾಡಿದ ಪ್ರಮುಖ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಇದರಲ್ಲಿ ರಾಜಕೀಯ ಷಡ್ಯಂತರ ಅಡಗಿದೆ. ಕೂಡಲೇ ಪ್ರಮುಖ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ. ಕುಲಕರ್ಣಿ, ಮುಖಂಡರಾದ ಶ್ರೀಕಾಂತ ಸಿದ್ದನಾಯಕ, ಅಶೋಕ ಭಜಂತ್ರಿ, ಎಸ್.ಎಸ್. ಬಡ್ಡಿ, ಎಲ್.ಬಿ. ಅಚನೂರ, ಕೆ.ಜಿ. ಹುನಗುಂದ, ಎಚ್.ಎನ್. ಅಂದೇಲಿ, ಎಂ.ಬಿ. ಬದಾಮಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts