Tuesday, 13th November 2018  

Vijayavani

ಲೋಕ ಎಲೆಕ್ಷನ್​​ ಗೆಲುವಿಗೆ ಮೈತ್ರಿಕೂಟ ಪ್ಲ್ಯಾನ್-ಮುಂದಿನ ವರ್ಷ ಟಿಪ್ಪು ಜಯಂತಿಗೆ ಬ್ರೇಕ್​        ಪಂಚಭೂತಗಳಲ್ಲಿ ಅನಂತ ಲೀನ-ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ        ಮೊಳಗಿದ ಅನಂತ್ ಅಮರ್​ ರಹೇ ಉದ್ಘೋಷ- ಅಗಲಿದ ಕಮಲಾಧಿಪತಿಗೆ ಅಡ್ವಾಣಿ, ಶಾ ಅಂತಿಮ ನಮನ        ರೆಡ್ಡಿ ಕೇಸ್​ನಲ್ಲಿ ಸಿಸಿಬಿಗೆ ಕೋರ್ಟ್​ ತರಾಟೆ- ರೆಡ್ಡಿಯನ್ನ ಬಂಧಿಸಿದ್ದೇಕೆ ಎಂದು ಪ್ರಶ್ನೆ-ಆದೇಶ ನಾಳೆಗೆ ಕಾಯ್ದಿಟ್ಟ ನ್ಯಾಯಾಲಯ        ರಫೇಲ್ ಡೀಲ್​​ನಲ್ಲಿ ರಿಲಯನ್ಸ್ ಆಯ್ಕೆ ನಮ್ಮದು- ಡಸಾಲ್ಟ್ ಸಿಇಓ ಸ್ಪಷ್ಟನೆ- ಎರಿಕ್ ಮಾತು ಸುಳ್ಳೆಂದ ಕಾಂಗ್ರೆಸ್ ಮತ್ತೆ ಹಳೇರಾಗ.!        ಮಹಾಘಟಬಂಧನ್​ ವಿರುದ್ಧ ತಲೈವಾ ಘರ್ಜನೆ- ಮೋದಿ ಪರ ಡೈಲಾಗ್​​ಗೆ ರಜನಿ ಸಮರ್ಥನೆ-ಬಿಜೆಪಿ ಕಡೆ ವಾಲುತ್ತಾರಾ ತಲೈವಾ?       
Breaking News

23 ರಂದು ಅದ್ಭುತ ಮಾತೃತ್ವ ಕಾರ್ಯಕ್ರಮ

Sunday, 17.06.2018, 12:28 AM       No Comments

<<500 ಜನ ಗರ್ಭಿಣಿಯರು ಕಾರ್ಯಕ್ರಮದಲ್ಲಿ ಭಾಗಿ>>

ಬಾಗಲಕೋಟೆ: ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕುಮಾರೇಶ್ವರ ಆಸ್ಪತ್ರೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಹಯೋಗದಲ್ಲಿ ಜೂ.23 ರಂದು ಅದ್ಭುತ ಮಾತೃತ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಅಂದು ಮಧ್ಯಾಹ್ನ 3.30 ಗಂಟೆಗೆ ನಿಜಲಿಂಗಪ್ಪ ಮೆಡಿಕಲ್ ಕಾಲೇಜ್​ನ ಅತ್ರೆಯ ಹಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ ಅಧ್ಯಕ್ಷತೆ ವಹಿಸಲಿದ್ದಾರೆ. ನವಿ ಮುಂಬೈನ ನೀಲ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಿ ಡಾ.ಬಿ.ಕೆ.ಶುಭದಾ ನೀಲ ಮತ್ತ ಯೋಗ ಪರಿಣತರಾದ ಇ.ವಿ.ಗಿರೀಶ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರೋಗ್ಯವಂತ ತಾಯಿ ಮತ್ತು ಮಗುವನ್ನು ರೂಪಿಸುವ ಉದ್ದೇಶದಿಂದ ಬಿವಿವಿ ಸಂಘ ಅದ್ಭುತ ಮಾತೃತ್ವ ಅಭಿಯಾನ ಹಮ್ಮಿಕೊಂಡಿದ್ದು, ಪ್ರಥಮ ಹಂತದ ಕಾರ್ಯಕ್ರಮದಲ್ಲಿ 500 ಜನ ಗರ್ಭಿಣಿಯರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯ ಯೋಜನೆ ಕಲ್ಪನೆಯಾಗಿರುವ ಈ ಅಭಿಯಾನದಲ್ಲಿ ಪ್ರತಿಯೊಬ್ಬ ಗರ್ಭಿಣಿಗೆ ಆರೋಗ್ಯ ರಕ್ಷಣೆ, ಯೋಗ, ಆಹಾರ ಪಥ್ಯೆ, ಧ್ಯಾನದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ ಎಂದರು.

ಭಾರತೀಯ ಪ್ರಸೂತಿ ತಜ್ಞರ ಸಂಸ್ಥೆ ಈ ಅಭಿಯಾನ ಆರಂಭಿಸಿದೆ. ಈ ಸಂಸ್ಥೆ 35000 ಸದಸ್ಯರ ಮೂಲಕ ದೇಶದ 245 ನಗರಗಳಲ್ಲಿ ಗರ್ಭಿಣಿಯರಿಗೆ ಮಾತೃತ್ವದ ಕುರಿತು ಸೂಕ್ತ ಮಾಹಿತಿ ಮತ್ತು ಶಿಕ್ಷಣವನ್ನು ಡಿಜಿಟಲ್ ಆಪ್ ಮೂಲಕ ನೀಡುವ ಯೋಜನೆ ಹಮ್ಮಿಕೊಂಡಿದೆ. ಸಂಸ್ಥೆಯ ಸದಸ್ಯತ್ವ ಹೊಂದಿದ ಆಸ್ಪತ್ರೆಗಳಲ್ಲಿ ಗರ್ಭಿಣಿ ಮಹಿಳೆಯರಿಗೆ ಪ್ರತಿ ತಿಂಗಳ 9ರಂದು ಉಚಿತವಾಗಿ ಪ್ರಸವ ಪೂರ್ವ ಆರೈಕೆ ನೀಡುವ ಅಭಿಯಾನ ರೂಪಿಸಿದೆ. ಈ ಸಂಸ್ಥೆ ಸದಸ್ಯತ್ವ ಹೊಂದಿರುವ ಬಿವಿವಿ ಸಂಘದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಅಭಿಯಾನದಲ್ಲಿ ನಿರಂತರವಾಗಿ ಭಾಗವಹಿಸಲಿದೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಕ್ಷೇತ್ರದ 92 ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದೇನೆ. ಅಲ್ಲದೆ ಕಮತಗಿ, ಅಮೀನಗಡ ಪಟ್ಟಣ ಪಂಚಾಯಿತಿ ಮತ್ತು ಬಾಗಲಕೋಟೆ ನಗರಸಭೆ, ಬಾಗಲಕೋಟೆ, ಹುನಗುಂದ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ನಡೆಸಿ ಕ್ಷೇತ್ರದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಮುಂದಿನ ವಾರದಿಂದ ಪ್ರತಿದಿನ ಎರಡು ಮೂರು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಭಿವೃದ್ಧಿಗೆ ಒತ್ತು ನೀಡುವೆ. ಗಲಗಲಿ ಜಿಪಂ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ.

ವೀರಣ್ಣ ಚರಂತಿಮಠ, ಬಾಗಲಕೋಟೆ ಶಾಸಕ

 

Leave a Reply

Your email address will not be published. Required fields are marked *

Back To Top