ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಬಾಗಲಕೋಟೆ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆ ಮಂಗಳವಾರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ತಿಳಿಸಿದ್ದಾರೆ.

ಬಂದ್‌ಗೆ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆ ಮಂಗಳವಾರ ಒಂದು ದಿನ ವಾಯುವ್ಯ ಸಾರಿಗೆ ಸಂಸ್ಥೆ ಬಸ್‌ಗಳು ಸಹ ರಸ್ತೆಗೆ ಇಳಿಯುವುದಿಲ್ಲ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಭಾರತ ಬಂದ್‌ಗೆ ಸಿಐಟಿಯು, ಐಎನ್‌ಟಿಸಿ, ಎಚ್‌ಎಂಎಸ್, ಬಿಎಸ್‌ಎನ್‌ಎಲ್ ನೌಕರರ ಸಂಘ, ಬಿಸಿಯೂಟ ಕಾರ್ಯಕರ್ತೆಯರು, ಅಖಿಲ ಭಾರತ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಸೇರಿ ಹತ್ತಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಸ್‌ಗಳ ಓಡಾಟ ಸ್ಥಗತಿಗೊಳಿಸಲು ನಿರ್ಧರಿಸಿರುವುದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಲಿದೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸುವುದರಿಂದ ಜನಜೀವನದ ಮೇಲೂ ಸ್ವಲ್ಪಮಟ್ಟಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ, ಆಸ್ಪತ್ರೆ, ಔಷಧ ಅಂಗಡಿಗಳು ಯಥಾ ರೀತಿ ಕಾರ್ಯನಿರ್ವಹಿಸಲಿವೆ.

Leave a Reply

Your email address will not be published. Required fields are marked *