More

    ಜನತಾ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ

    ಬಾಗಲಕೋಟೆ: ಜಿಲ್ಲಾದ್ಯಂತ ಒಂದು ತಿಂಗಳು ಕಾಲ ಹಮ್ಮಿಕೊಂಡ ಕಾನೂನು ಸಾಕ್ಷರತಾ ರಥ ಯಾತ್ರೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಕಟ್ಟಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.

    ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ನ್ಯಾಯಾಧೀಶ ಅನಿಲ ಕಟ್ಟಿ ಮಾತನಾಡಿ, ಕಾನೂನು ರಥಯಾತ್ರೆ ಮೂಲಕ ಸಂಚಾರಿ ಜನತಾ ನ್ಯಾಯಾಲಯದ ಕಾನೂನು ಅರಿವು ನೆರವು ಹಾಗೂ ಲೋಕ ಅದಾಲತ್ ಸಹ ನಡೆಸಲಾಗುತ್ತಿದೆ. ಕಕ್ಷಿದಾರರ ಹಾಗೂ ಸಾರ್ವಜನಿಕರ ವ್ಯಾಪ್ತಿಯಲ್ಲಿಯೇ ಜನತಾ ನ್ಯಾಯಾಲಯದ ಮೂಲಕ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಲಾಗುತ್ತಿದೆ. ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.

    2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ ಸಿ.ಬಿ., ಪ್ರಧಾನ ಕೌಟುಂಬಿಕ ನ್ಯಾಯಾಧೀಶೆ ಶೀಲಾ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಪ್ರಧಾನ ಹಿರಿಯ ನ್ಯಾಯಾಧೀಶ ಪ್ರಕಾಶ ವಿ., 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ಎ. ಮೊಗಲಾನಿ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಆರ್.ಎಲ್. ಹೊನೊಲೆ, ಪ್ರಧಾನಿ ದಿವಾಣಿ ನ್ಯಾಯಾಧೀಶ ಮಹೇಶ ಚಂದ್ರಕಾಂತ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಚೌಕಿಮಠ ಇತರರು ಉಪಸ್ಥಿತರಿದ್ದರು.

    ಕಾನೂನು ಅರಿವು ನೆರವು ಕಾರ್ಯಕ್ರಮ
    ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ಮಂದಿರ, ಶಿರೂರಿನ ವೀರಶೈವ ಗ್ರಾಮೀಣ ವಿದ್ಯಾವರ್ಧಕ ಸಂಘದ ಕಿತ್ತೂರು ಚನ್ನಮ್ಮ ಪ್ರೌಢಶಾಲೆ ಹಾಗೂ ಕಿರಸೂರ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts