25.7 C
Bangalore
Sunday, December 15, 2019

ಜಿಲ್ಲೆಯಲ್ಲಿ ಕನಕ ಭವನ ನಿರ್ಮಾಣ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬಾಗಲಕೋಟೆ: ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ದಾಸ ಶ್ರೇಷ್ಠ ಕನಕದಾಸರ ಭವನ ಜಿಲ್ಲೆಯಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಕೀರ್ತನೆಗಳ ಮೂಲಕ ಕ್ರಾಂತಿ ಮಾಡಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ ಎಂದು ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಕ್ತ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಕನ್ನಡವನ್ನು ಶ್ರೀಮಂತ ಭಾಷೆಯನ್ನಾಗಿ ಮಾಡಿದ್ದು, ಅಂತಹ ಮಹಾನ್ ಸಂತರ ಭವನ ನಿರ್ಮಾಣ ಮಾಡಲಾಗುವುದು ಎಂದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಂಶೋಧನಾ ಸಹಾಯಕ ಡಾ.ಎಚ್.ಎಸ್. ಘಂಟಿ ಉಪನ್ಯಾಸ ನೀಡಿ, ಹಾಲುಮತ ಸಮಾಜ ಶಿವ-ಪಾರ್ವತಿಯರ ಸಂಸ್ಕೃತಿಯ ಪ್ರತೀಕವಾಗಿದೆ. ಇಂತಹ ಸಮಾಜದಲ್ಲಿ ಜನಿಸಿದ ಕನಕದಾಸರು ಕೀರ್ತನೆಗಳ ಮೂಲಕ ದಾಸ ಪರಂಪರೆಯಲ್ಲಿ ಅಗ್ರಗಣ್ಯರಾದರು. ಅವರ ಸಾಹಿತ್ಯದಲ್ಲಿ ಜಾತ್ಯತೀತ ಭಾವ ತುಂಬಿದೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಾಮಾಜಿಕ, ಆರ್ಥಿಕ ಪ್ರಗತಿ ಸಾಧಿಸಬೇಕು. ಕನಕದಾಸರ ಆದರ್ಶ, ತತ್ವಗಳನ್ನು ಅರಿಯಬೇಕು ಎಂದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಂಶೋಧಕ ಡಾ.ಜಗನ್ನಾಥ ಆರ್.ಗೇನಣ್ಣವರ ಅವರಿಗೆ ಜಿಲ್ಲಾಡಳಿತದಿಂದ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಾಗಲಕೋಟೆ ತಾಪಂ ಅಧ್ಯಕ್ಷ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಪಂ ಸದಸ್ಯೆ ಹನಮವ್ವ ಕರಿಹೊಳೆ, ನಗರಸಭೆಯ ಸದಸ್ಯರಾದ ಸರಸ್ವತಿ ಕುರಬರ, ಶಾಂತಾ ಬರಮಕ್ಕನವರ, ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಇತರರು ಇದ್ದರು. ಬಸವರಾಜ ಶಿರೂರ ಸ್ವಾಗತಿಸಿದರು. ಶ್ರೀಶೈಲ ಕಂಕಣವಾಡಿ ವಂದಿಸಿದರು. ಜಾಸ್ಮೀನ್ ಕಿಲ್ಲೆದಾರ ನಿರೂಪಿಸಿದರು.

ಭವ್ಯ ಮೆರವಣಿಗೆ
ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ನವನಗರದ ಬಸ್ ನಿಲ್ದಾಣ, ಎಲ್‌ಐಸಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಮುಕ್ತಾಯಗೊಂಡಿತು.

 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...