More

    ವೇತನ ಪಾವತಿಗೆ ಆಗ್ರಹ

    ಬಾಗಲಕೋಟೆ: ಜಿಲ್ಲೆಯ ವಿವಿಧ ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯ ವೇತನ ಕೂಡಾ ಪಾವತಿಸಬೇಕು ಎಂದು ವಸತಿ ನಿಲಯಗಳ ಕಾರ್ಮಿಕರು ಎಐಯುಟಿಯುಸಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕಾರ್ಮಿಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರ ಮೂಲಕ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಪ್ರತಿಭಟನೆ ಉದ್ದೇಶಿಸಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್.ಟಿ. ಮಾತನಾಡಿ,ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರು ಸೇರಿದಂತೆ ಒಟ್ಟಾರೆ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸಂಕಷ್ಟದಲ್ಲಿ ಇದ್ದಾರೆ.

    ರಾಜ್ಯ ಕೇಂದ್ರ ಸರ್ಕಾರ ಲಾಕ್‌ಡೌನ್ ಹಾಗೂ ಬಾಕಿ ವೇತನ ಪಾವತಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
    ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಸತಿಶಾಲೆಗಳು ಮತ್ತು ವಸತಿ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಳೆದ 10-12 ವರ್ಷಗಳಿಂದ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸಿದ್ದಾರೆ. ಲಾಕ್‌ಡೌನ್ ನಿಂದ ಕಾರ್ಮಿಕರು ಕೆಲಸವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇಂದಿಗೂ ಆರ್ಥಿಕ ಸ್ಥಿತಿ ಸುಧಾರಣೆಯಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್ ಅವಧಿಲ್ಲಿ ವೇತನ ನೀಡಬೇಕೆಂದು ಆದೇಶಿಸಿದ್ದರು ಸಹ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷೃ ಧೋರಣೆ ಅನಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜೂನ್ ತಿಂಗಳಿನಿಂದ ವೇತನ ಪಾವತಿ ಮಾಡಿ ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು. ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಎಸ್‌ಐ ಮತ್ತು ಇಪಿಎ್ನ ಪಾವತಿ ಮಾಡಿರುವ ದಾಖಲೆಗಳನ್ನು ಕಾರ್ಮಿಕರಿಗೆ ಒದಗಿಸಬೇಕು. ಇಲ್ಲವೇ ಇಲಾಖೆಯಿಂದಲೇ ಸೌಲಭ್ಯಗಳನ್ನು ನೀಡಬೇಕು. ಲಾಕ್‌ಡೌನ್ ಅವಧಿಯ ಹಿಂದಿನ ತಿಂಗಳುಗಳಲ್ಲಿ ಬಾಕಿ ಉಳಿಸಿಕೊಂಡಿರುವ ವೇತನವನ್ನು ತಕ್ಷಣವೇ ಪಾವತಿಸಬೇಕು. ಹೆಚ್ಚುವರಿ ಸಿಬ್ಬಂದಿ ಹೆಸರಿನಲ್ಲಿ ಕೆಲಸ ಕಳೆದುಕೊಂಡಿರುವ ಕಾರ್ಮಿಕರಿಗೆ ಖಾಲಿ ಇರುವ ಕಡೆ ಮತ್ತು ಹೊಸ ವಸತಿ ನಿಲಯಗಳಲ್ಲಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಸುರೇಶ್ ಬಿಸನಾಳ,ರೇಣುಕಾ ಬೆನಕೊಪ್ಪ, ಸುರೇಶ ಬಿಸನಾಳ, ಅಶ್ವಿನಿ ಎಂ.ಸಂಗೀತಾ ಬಿ. ಸೇರಿದಂತೆ ಇತರರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts