25.1 C
Bangalore
Friday, December 6, 2019

ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ನಾಮಪತ್ರ ಸಲ್ಲಿಕೆ

Latest News

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಸೋಮವಾರ ನಾಮಪತ್ರ ಸಲ್ಲಿಸಿದರು.

ಬಾದಾಮಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಳಗ್ಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಾದಾಮಿ ಬನಶಂಕರಿ ದೇವಿಗೆ, ಮುಚಖಂಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಸೇರಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದು ಗೆಲುವಿಗಾಗಿ ಪ್ರಾರ್ಥಿಸಿದರು. ಮಧ್ಯಾಹ್ನ 2.30 ಗಂಟೆಗೆ ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್. ರಾಮಚಂದ್ರನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಶಾಸಕ ಪಿ.ಎಚ್. ಪೂಜಾರ, ವಿ.ಪ. ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಮುಖಂಡ ರಾಮಣ್ಣ ಕುರಿ ಇದ್ದರು.

ನಾಲ್ಕನೇ ಬಾರಿಗೆ ಬಿಜೆಪಿ ಗೆಲುವು ನಿಶ್ಚಿತ
ಬಾಗಲಕೋಟೆ ಜಿಲ್ಲೆಯ ಮತದಾರರು ಮೂರು ಬಾರಿ ಆಶೀರ್ವಾದ ಮಾಡಿ ಸಂಸತ್ತಿಗೆ ಕಳುಹಿಸಿದ್ದಾರೆ. 15 ವರ್ಷದ ಅವಧಿಯಲ್ಲಿ ಮತದಾರ ಪ್ರಭುಗಳ ಭಾವನೆಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾಲ್ಕನೇ ಬಾರಿಯೂ ಕ್ಷೇತ್ರದ ಜನ ಬೆಂಬಲಿಸಲಿದ್ದಾರೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮ ಜಾರಿ ಮಾಡಿ ದೇಶವನ್ನು ಅಭಿವೃದ್ಧಿ ಪಥತದತ್ತ ಮುನ್ನಡೆಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲುತ್ತದೆ. ದೇಶ ಮತ್ತು ವಿಶ್ವದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಎಲ್ಲರ ಆಶಯವಾಗಿದೆ. ಇದಕ್ಕಾಗಿ ದೇಶದ ಜನರು ಬಿಜೆಪಿಯನ್ನು ಬೆಂಬಲಿಸುತ್ತಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಗದ್ದುಗೆ ಏರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.





Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...