More

    ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ

    ಬಾಗಲಕೋಟೆ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳುಸುವುದು ನಿಶ್ಚಿತ. ಇದರಲ್ಲಿ ಅನುಮಾನ ಬೇಡ. ಶೀಘ್ರದಲ್ಲಿ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಪಶುಪಾಲನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ ಹೇಳಿದರು.

    ಗೋ ಹತ್ಯೆ ನಿಷೇಧ ಕಾಯ್ದೆ ನಮ್ಮ ಪಕ್ಷದ ಅಜೆಂಡಾ. ಮೊದಲಿನಿಂದ ಈ ವಿಷಯದಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕೆಲವೇ ದಿನಗಳಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ತರಲಿದ್ದೇವೆ. ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಉಳಿಯುತ್ತದೆ ಇಲ್ಲವೋ ಎನ್ನುವ ಬಗ್ಗೆ ಗೊತ್ತಿಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧನಾಗಿದ್ದೇನೆ ಎಂದು ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ರಾಜ್ಯದಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದ ನಂತರ ಪಶುಪಾಲನೆ ಇಲಾಖೆಯಲ್ಲಿ ರೈತರು, ಕುರಿ, ಮೇಕೆ ಕೋಳಿ ಸಾಕಾಣಿಕೆಗೆದಾರರಿಗೆ ಉತ್ತಮವಾದ ಸೇವೆ ನೀಡಲಾಗುತ್ತಿದೆ. ಸಕಾಲದಲ್ಲಿ ರೈತರ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈಗಾಗಲೇ ರಾಜ್ಯದ 16 ಜಿಲ್ಲೆಗೆಳಿಗೆ ಪಶು ಸಂಚಾರಿ ಅಂಬುಲೆನ್ಸ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೂ ಸದ್ಯದಲ್ಲಿಯೇ ವಿಸ್ತರಿಸಲಾಗುತ್ತಿದೆ. ಈ ಸಂಚಾರಿ ಅಂಬುಲೇನ್ಸ್ ವಿಶೇಷವಾದ ಪಶು ಸೇವಾ ಸೌಲಭ್ಯ, ಶಸ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕಾ್ಯೃನಿಂಗ್ ಘಟಕ, ತುರ್ತು ಚಿಕಿತ್ಸಾ ಘಟಕ ಹೊಂದಿದೆ. ಒಟ್ಟಾರೆಯಾಗಿ ಪಶು ಆಸ್ಪತ್ರೆಯೇ ರೈತರ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಿದರು.

    ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ವಾರು ರೂಮ್ ಸ್ಥಾಪಿಸಲಾಗುತ್ತಿದೆ. ಈ ವಾರ್ ರೂಮ್ ಮೂಲಕ ಪಶುಪಾಲಕರು ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಸಿಕೊಂಡವರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಪಶುವೈದ್ಯಕೀಯ ಸೇವೆ ಕಾಲ ಮಿತಿಯಲ್ಲಿ ನೀಡಲಾಗುತ್ತದೆ. ದಿನ 24 ಗಂಟೆಗಳ ಕಾರ್ಯನಿರ್ವಹಿಸಲಿದ್ದು, ಟೋಲ್ ಪ್ರೀ ನಂಬರ್ ನೀಡಲಾಗುತ್ತದೆ. ರಾಜ್ಯದ ಯಾವುದೇ ಭಾಗದ ಜನರು ಕರೆ ಮಾಡಿ ತಮ್ಮ ಪ್ರಾಣಿಗಳ ಚಿಕಿತ್ಸೆಗೆ ಮನವಿ ಮಾಡಿದಲ್ಲಿ. ಸಮೀಪದ ಪಶು ವೈದ್ಯರನ್ನು ಸಂಪರ್ಕಿಸಿ ಸ್ಥಳಕ್ಕೆ ಕಳುಹಿಸಿ ಕೊಡಲಾಗುವುದು. ಇದರಿಂದ ಕೋಳಿ, ಕುರಿ, ಹಂದಿ ಸಾಕಾಣಿಕೆದಾರರಿಗೆ ಅನುಕೂಲವಾಗಲಿದೆ. ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಎಲ್ಲ ಪಶು ಆಸ್ಪತ್ರೆಯಲ್ಲಿ 30 ಸಾವಿರಕ್ಕೂ ಹೆಚ್ಚು ಸಸಿ ನೆಡಲಾಗಿದೆ. 10 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಪಶು ಭವನ ನಿರ್ಮಾಣ ಮಾಡಲಾಗುವುದು ಎಂದರು.

    ಪ್ರಾಣಿ ಹಿಂಸೆ ತಡೆಯಲು ಕಾನೂನುಗಳನ್ನು ಬಿಗಿಗೊಳಿಸಲು ಕ್ರಮವಹಿಸಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಪ್ರಾಣಿ ಕಲ್ಯಾಣ ಮಂಡಳ ಸ್ಥಾಪನೆ ಮಾಡಲಾಗಿದೆ. ಲಾಕ್‌ಡೌನ್ ಸಮಯದಲ್ಲಿ ರೈತರ ಜಾನುವಾರು, ಇತರೆ ಪ್ರಾಣಿಗಳಿಗೆ ಆಹಾರ, ವೈದ್ಯಕೀಯ ಸೌಲಭ್ಯ ವಿತರಿಸಲಾಗಿದೆ. ಅಲ್ಲದೆ 1 ಕೋಟಿ 10 ಲಕ್ಷ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ನೀಡಲಾಗಿದೆ.

    ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಜಿ.ಪಂ ಸಿಇಒ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts