More

    7 ರಂದು ಪದಗ್ರಹಣ ಸಮಾರಂಭ

    ಬಾಗಲಕೋಟೆ: ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ನನಗೆ ವಹಿಸಿರುವ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುತ್ತೇನೆ. ಮಾ.7 ರಂದು ಬಾಗಲಕೋಟೆ ನಗರದಲ್ಲಿ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೂತನ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

    ಅಂದು ಬೆಳಗ್ಗೆ 11ಗಂಟೆಗೆ ನಗರದ ಚರಂತಿಮಠದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಜಿಲ್ಲಾಧ್ಯಕ್ಷ, ಶಾಸಕ ಸಿದ್ದು ಸವದಿ, ಶಾಸಕರಾದ ವೀರಣ್ಣ ಚರಂತಿಮಠ, ಮುರಗೇಶ ನಿರಾಣಿ ಸೇರಿದಂತೆ ವಿಧಾನ ಪರಿಷತ್ ಸದಸ್ಯರು, ಜಿಪಂ, ತಾಪಂ, ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಅಧಿಕ ಪ್ರಮಾಣದಲ್ಲಿ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರ, ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಪಕ್ಷದಿಂದ ಅಧಿಕ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು. ಜಿಲ್ಲೆಯ ಎಲ್ಲ ಬೂತ್ ಸಮಿತಿಗಳನ್ನು ಕ್ರಿಯಾಶೀಲಗೊಳಿಸಿ ಬಲಪಡಿಸಲಾಗುವುದು. ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಸಂಘಟನೆ ನಡೆಯಲಿದೆ ಎಂದು ತಿಳಿಸಿದರು.

    ಜಿಲ್ಲಾ ವಕ್ತಾರ ಜಯಂತ ಕುರಂದವಾಡ ಮಾತನಾಡಿ, ಪದಗ್ರಹಣ ಸಮಾರಂಭ ಪೂರ್ಣಗೊಂಡ ಬಳಿಕ ಕಾರ್ಯಾಕಾರಣಿ ಸಭೆ ಮಾಡಲಾಗುವುದು. ಅಲ್ಲಿ ಪಕ್ಷದ ಮುಂದಿನ ನಡೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದ ಅವರು, ಸ್ವಾತಂತ್ರೃ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಸದನದ ಕಾರ್ಯ ಕಲಾಪಗಳನ್ನು ಬಲಿಕೊಡುತ್ತಿದೆ. ಇದರಿಂದ ಜನರ ಸಮಸ್ಯೆ, ಹೊಸ ಯೋಜನೆಗಳಿಗೆ ಹಿನ್ನಡೆಯಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿ ಜನ ರಾಜಕೀಯ ಪುನರ್ ಜನ್ಮ ನೀಡಿದ್ದಾರೆ. ಇದನ್ನು ಅರಿತು ಅವರು ಅಭಿವೃದ್ಧಿ ಪರ ವಿಷಯಗಳನ್ನು ಚರ್ಚೆ ಮಾಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಬೇಕು. ಅದು ಬಿಟ್ಟು ಇಲ್ಲಸಲ್ಲದ ವಿಚಾರಕ್ಕೆ ಸದನದ ಗೌರವ ಹಾಳು ಮಾಡಬಾರದು ಎಂದು ಆಗ್ರಹಿಸಿದರು. ಮುಖಂಡರಾದ ರಾಜು ನಾಯ್ಕರ, ಎಸ್.ಟಿ.ಗೌಡರ, ಬಸವರಾಜ ಯಂಕಂಚಿ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಬಾಗಲಕೋಟೆ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷರ ಸಾರಥ್ಯದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಅಲ್ಲದೆ, ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತದಲ್ಲಿದೆ. ಸರ್ಕಾರಗಳು ಪ್ರಕಟಿಸುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಒತ್ತು ಕೊಡಲಾಗುವುದು.
    ರಾಜು ರೇವಣಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts