More

    ಹೈವೇಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು

    ಬಾಗಲಕೋಟೆ: ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡಿದೆ. ಜಿಲ್ಲೆಯ ಎರಡು ಪ್ರಮುಖ ಹೆದ್ದಾರಿಗಳು ಮೇಲ್ದರ್ಜೆಗೆ ಏರಲಿವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

    ಜಿಲ್ಲೆಯಲ್ಲಿ ಹಾಯ್ದು ಹೋಗುವ ಬಾಣಾಪುರ- ಗದ್ದನಕೇರಿ ಕ್ರಾಸ್ ವರೆಗಿನ 40 ಕಿ.ಮೀ. (367 ರಾಷ್ಟ್ರೀಯ ಹೆದ್ದಾರಿ)ಗೆ 63 ಕೋಟಿ ರೂ. ಹಾಗೂ ವಿಜಯಪುರದಿಂದ ಸಂಕೇಶ್ವರ ವರೆಗಿನ ರಾಷ್ಟ್ರೀಯ ಹೆದ್ದಾರಿ 548 ಬಿ ನಾಲ್ಕು ಪಥಕ್ಕೆ ಮೇಲ್ದರ್ಜೆಗೆ ಏರಿಸಲು 490 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿ ಒಪ್ಪಿಗೆ ನೀಡಲಿದೆ. ಬಾಗಲಕೋಟೆಯಿಂದ ಬೆಳಗಾವಿ ವರೆಗಿನ ಹೆದ್ದಾರಿ ಡಾಂಬರೀಕರಣಕ್ಕೆ 54 ಕೋಟಿ ರೂ. ನೀಡುವುದಾಗಿ ಸಚಿವ ಗಡ್ಕರಿ ತಿಳಿಸಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಇನ್ನು ರಾಜ್ಯದಲ್ಲಿ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಲು ವಿಸ್ತೃತವಾಗಿ ಯೋಜನಾ ವರದಿ ಸಿದ್ಧಪಡಿಸಬೇಕಿದ್ದು, ಯೋಜನಾ ವರದಿಯನ್ನು ತಯಾರಿಸಲು 50 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಮಳೆ, ಪ್ರವಾಹದಿಂದಾಗಿ ರಾಜ್ಯದಲ್ಲಿ ಸುಮಾರು 72 ಸಾವಿರ ಕಿ.ಮೀ. ರಸ್ತೆಗಳು ಹಾನಿಯಾಗಿವೆ. ಅಲ್ಲದೆ, ಸೇತುವೆಗಳು ಹಾನಿಯಾಗಿದೆ. ಇವುಗಳ ದುರಸ್ತಿಗಾಗಿ 600 ಕೋಟಿ ರೂ. ಬಿಡುಗಡೆಯಾಗಿದ್ದು, ಮಾರ್ಚ್ ಅಂತ್ಯಕ್ಕೆ ಈ ಎಲ್ಲ ರಸ್ತೆಗಳನ್ನು ದುರಸ್ತಿ ಮಾಡಿ ಪುನರ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

    ರಾಜ್ಯದಲ್ಲಿನ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸಲು, ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರ ಸಚಿವ ನಿತೀನ್ ಗಡ್ಕರಿ ವಿಶೇಷ ಗಮನ ಹರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 8819 ಕಿ.ಮೀ. ರಸ್ತೆಯನ್ನು ನಿರ್ಮಿಸಲು ಮತ್ತು ನವೀಕರಿಸಲು 77297 ಕೋಟಿ ರೂ.ಗಳ ವೆಚ್ಚದ 222 ಯೋಜನೆಗಳನ್ನು ಅನುಮೋದಿಸಿದ್ದಾರೆ. ಅವರ ನಾಯಕತ್ವದಲ್ಲಿ 5708.61 ಕಿ.ಮೀ. ಹೆದ್ದಾರಿಯನ್ನು 43864 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು 2384 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳ ಅಗಲೀಕರಣ ಮತ್ತು ಪುನರ್‌ನಿರ್ಮಾಣ ಯೋಜನೆಯಡಿ 37311 ಕೋಟಿ ವೆಚ್ಚದಲ್ಲಿ 71 ಯೋಜನೆಗಳು ಅನುಮೋದನೆಗೊಂಡು ಪ್ರಗತಿಯಲ್ಲಿವೆ ಎಂದು ಹೇಳಿದರು. ಶಾಸಕ ಡಾ. ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಎಸ್ಪಿ ಲೋಕೇಶ ಜಗಲಾಸರ್ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಸಿದ್ದರಾಮಯ್ಯಗೆ ಟಾಂಗ್
    ಯಾವುದೇ ಪಕ್ಷೃ ಇರಲಿ, ಚುನಾವಣೆಯ ಕಾಲಕ್ಕೆ ಅಲ್ಲಿ ಯಾರೇ ಸ್ಪರ್ಧಿಸಲಿ, ಎದುರಾಳಿ ಯಾರಿದ್ದರೂ ಅವರನ್ನು ಸೋಲಿಸುವ ಗುರಿ ಇರುತ್ತದೆ. ಅದನ್ನು ಬಿಟ್ಟು ಅವರು, ಇವರುಗಳು ಕೂಡಿ ನಮ್ಮನ್ನು ಸೋಲಿಸಿದರು ಎಂದು ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದರು. ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಎದುರಾಳಿಯನ್ನು ಸೋಲಿಸುವುದು ಪ್ರತಿಯೊಬ್ಬರ, ಪ್ರತಿಯೊಂದು ಪಕ್ಷೃದ ಗುರಿಯಾಗಿರುತ್ತದೆ. ಅಲ್ಲಿ ಜನತೆ ಯಾರನ್ನು ಬೆಂಬಲಿಸಿ ಗೆಲ್ಲಿಸಿದ್ದಾರೆ ಎಂಬುದು ಮುಖ್ಯವಾಗುತ್ತದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಒಳ ಒಪ್ಪಂದವು ಇರಲಿಲ್ಲ ಎಂದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts