ಯೋಗ ದಿನಾಚರಣೆ ಯಶಸ್ವಿಗೊಳಿಸಲು ಶ್ರಮಿಸಿ

ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ ಹೇಳಿದರು.

ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಗ್ಗೆ 6.30 ರಿಂದ 8.30 ಗಂಟೆವರೆಗೆ ಧ್ಯಾನ ಹಾಗೂ ಯೋಗ ಪ್ರಾತ್ಯಕ್ಷಿಕೆ ಜರುಗಲಿದೆ. ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಲೆಗಳ ಮಕ್ಕಳನ್ನು ಈ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು. ನವನಗರ ವ್ಯಾಪ್ತಿಯ ವಿವಿಧ ಇಲಾಖೆಯಡಿ ಬರುವ ವಸತಿ ಶಾಲೆಗಳ ಮಕ್ಕಳೂ ಸಹ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಂಬಂಸಿದ ಅಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಎಲ್ಲ ಅಕಾರಿಗಳು ಹಾಗೂ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಯೋಗ ನಿರತ ಸಂಘ-ಸಂಸ್ಥೆಗಳು, ಎನ್‌ಸಿಸಿ ಕೆಡೆಟ್ಸ್, ಹೋಮ್‌ಗಾರ್ಡ್ಸ್, ರೋಟರಿ, ಪತಂಜಲಿ, ಲಯನ್ಸ್, ಜ್ಞಾನೇಶ್ವರಿ ಆಯುಷ್ ಫೌಂಡೇಷನ್, ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎನ್‌ವೈಕೆ ಸೇವಾದಳದವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಜಿಲ್ಲಾ ಕ್ರೀಡಾಂಗಣ ಸ್ವಚ್ಛವಾಗಿಡಬೇಕು. ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಯೋಗ ಮಾಡಲು ಸಡಿಲ ಬಟ್ಟೆ, ಪುರುಷರು ಟ್ರಾಕ್‌ಶೂಟ್, ಟೀ ಶರ್ಟ್ ಮತ್ತು ಮಹಿಳೆಯರು ಚೂಡಿದಾರ್ ಹಾಕಿಕೊಂಡು ಜತೆಗೆ ಹಾಸಿಗೆ ತರುವಂತೆ ಸಭೆಯಲ್ಲಿ ತಿಳಿಸಲಾಯಿತು.

ಜಿಲ್ಲಾ ಮಟ್ಟದ ಎಲ್ಲ ಅಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಪತಂಜಲಿ ಯೋಗ ಸಂಸ್ಥೆಯವರಿಗೆ ಯೋಗ, ಆಯುಷ್ ಔಷಧ ಹಾಗೂ ಮನೆಮದ್ದು ಪುಸ್ತಕಗಳ ಮಳಿಗೆ ಹಾಕಲು ತಿಳಿಸಲಾಯಿತು. ಇಬ್ಬರು ಉತ್ತಮ ಯೋಗ ಪಟುಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು.

ಜಿಲ್ಲಾ ಆಯುಷ್ ಅಕಾರಿ ಡಾ.ಆರ್.ಜಿ. ಮೇತ್ರಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಅನಂತ ದೇಸಾಯಿ, ಹಿರಿಯ ಆಯುಷ್ ವೈದ್ಯಾಕಾರಿ ಡಾ.ಚಂದ್ರಕಾಂತ ರಕ್ಕಸಗಿ, ವಿವಿಧ ಇಲಾಖೆ ಅಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *