20.4 C
Bengaluru
Monday, January 20, 2020

ಸಾಧನೆ ಇತರರಿಗೆ ಸ್ಫೂರ್ತಿಯಾಗಲಿ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬಾಗಲಕೋಟೆ: ಮಲೇಷ್ಯಾದಲ್ಲಿ ಈಚೆಗೆ ಜರುಗಿದ 16ನೇ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ವಿಜೇತ ಇಳಕಲ್ಲ ನಗರದ ಕರಾಟೆ ಪಟು ನಾಗಪ್ಪ ತಳವಾರ ಅವರನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ನಾಗಪ್ಪ 4 ಚಿನ್ನದ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ರಾಜ್ಯ ಮಟ್ಟದಲ್ಲಿ 1, ರಾಷ್ಟ್ರ ಮಟ್ಟದಲ್ಲಿ 2 ಚಿನ್ನದ ಪದಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಇವರ ಸಾಧನೆ ಜಿಲ್ಲೆಯ ಇತರ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರೋತ್ಸಾಹಧನವಾಗಿ 20 ಸಾವಿರ ರೂ., ಕೂಡಲಸಂಗಮ ಗ್ರಾಮ ಪಂಚಾಯಿತಿಯಿಂದ 20 ಸಾವಿರ ರೂ. ಸಹಾಯಧನ ನೀಡಲು ಕ್ರಮಕೈಗೊಳ್ಳಲಾಗುವುದು. ರಾಜ್ಯವಲಯದ ಯಾವುದಾದರೊಂದು ಯೋಜನೆಯಲ್ಲಿ ನಗದು ಪುರಸ್ಕಾರ, ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅಡಿ ಸಹಾಯಧನ ಮಂಜೂರು ಮಾಡಲು ಕ್ರೀಡಾ ಇಲಾಖೆಗೆ ಶಿಾರಸು ಮಾಡಲಾಗಿದೆ ಎಂದು ಹೇಳಿದರು.

ಹೊಸ ವರ್ಷದ ಲೆಕ್ಕ ಪರಿಶೋಧನೆ ಕಾರ್ಯ ನಡೆದಿದ್ದರಿಂದ ಕೆಲವೇ ದಿನಗಳಲ್ಲಿ ಕ್ರೀಡಾಪಟುಗೆ ಪ್ರೋತ್ಸಾಹಧನದ ಚೆಕ್ ನೀಡಲಾಗುವುದು. ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದಿರುವುದರಿಂದ ಸರ್ಕಾರದಿಂದ ಸಿಗಬೇಕಾದ ಸಹಾಯಧನವನ್ನು ಕೊಡಿಸಲಾಗುವುದು. ಮುಂದಿನ ದಿನಗಳಲ್ಲಿ ಕ್ರೀಡಾಪಟು ಜತೆಗೆ ತಂದೆ-ತಾಯಿ ಕರೆಸಿ ಸತ್ಕರಿಸಲಾಗುವುದು ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ಸನ್ಮಾನದ ಪಟ್ಟಿಯಲ್ಲಿ ಕರಾಟೆ ಪಟು ನಾಗಪ್ಪನನ್ನು ಪರಿಗಣಿಸಿ ಸನ್ಮಾನಿಸುವಂತೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ರೀಡೆಯಲ್ಲಿ ಖ್ಯಾತಿ ಪಡೆದ ಕ್ರೀಡಾಪಟುಗಳನ್ನು ಗುರುತಿಸಿ ಅವರು ಪಡೆದ ಪದಕ ಹಾಗೂ ಪ್ರಶಸ್ತಿ ಪತ್ರಗಳೊಂದಿಗೆ ಸನ್ಮಾನಿಸಲಾಗುವುದು. ಕ್ರೀಡಾ ಸಚಿವರು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಸರ್ಕಾರದಿಂದ ಸಿಗುವ ನಗದು ಹಾಗೂ ಪುರಸ್ಕಾರಗಳನ್ನು ಕೊಡಿಸಲಾಗುವುದು ಎಂದು ತಿಳಿಸಿದರು.

ಕ್ರೀಡಾಪಟುಗಳು ಇಂತಹ ಅವಕಾಶ ಸದುಪಯೋಗಪಡಿಸಿಕೊಂಡು ಕ್ರೀಡೆಗಳಲ್ಲಿ ತಾವು ಬೆಳೆಯುವುದರ ಜತೆಗೆ ಇತರ ಕ್ರೀಡಾಪಟುಗಳನ್ನು ಬೆಳೆಸುವ ಕಾರ್ಯ ಮಾಡಬೇಕೆಂದು ಹೇಳಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಭಾರಿ ಸಹಾಯಕ ನಿರ್ದೇಶಕ ಎಂ.ಎಂ. ಮೇಲಿನಮನಿ ಇತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...