ನಕಲು ಮುಕ್ತ ಪಾರದರ್ಶಕ ಪರೀಕ್ಷೆ ನಡೆಸಿ

ಬಾಗಲಕೋಟೆ: ಜೂ.21ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಕಾರಿ ಆರ್.ರಾಮಚಂದ್ರನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ 7197 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾದಾಮಿ 3, ಬಾಗಲಕೋಟೆ 4, ಬೀಳಗಿ 3, ಹುನಗುಂದ 2, ಜಮಖಂಡಿ 6 ಹಾಗೂ ಮುಧೋಳದಲ್ಲಿ 4 ಕೇಂದ್ರ ತೆರೆಯಲಾಗಿದೆ. ಬೆಳಗ್ಗೆ 9.30 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, 9.45ರ ನಂತರ ಬಂದ ವಿದ್ಯಾರ್ಥಿಗಳಿಗೆ ಕೇಂದ್ರದೊಳಗೆ ಪ್ರವೇಶವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಗೆ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ತಿಳಿಸಿದರು.

22 ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಅವರಿಗೆ ಅವರದ್ದಾಗಿದೆ. ತಮಗೆ ನೀಡಿರುವ ಕರ್ತವ್ಯ ಪಾಲಿಸಿ ಯಾವುದೇ ತರಹದ ಲೋಪ ಕಂಡು ಬರದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚಿಸಿದರು. ನಕಲು ರಹಿತ ಪರೀಕ್ಷೆ ನಡೆಸುವ ಸಲುವಾಗಿ ಸ್ಥಳೀಯ ಜಾಗೃತ ದಳ ಹಾಗೂ ಜಿಲ್ಲಾ ಮಟ್ಟದ ಜಾಗೃತ ದಳ ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳ ವರಾಂಡ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಲು ಹೇಳಿದರು.

ಕೇಂದ್ರದಲ್ಲಿ ಮುಖ್ಯಸ್ಥರನ್ನು ಹೊರತುಪಡಿಸಿ ಸಿಬ್ಬಂದಿ ಪರೀಕ್ಷಾ ಅವಯಲ್ಲಿ ಮೊಬೈಲ್ ಬಳಸುವಂತಿಲ್ಲ. ಮಾರ್ಗಾಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ತಲುಪಿಸಬೇಕು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ 144 ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಡಿಡಿಪಿಐ ಬಿ.ಎಚ್. ಗೋನಾಳ ಪರೀಕ್ಷೆ ಸಿದ್ಧತೆ ಕುರಿತು ಸಭೆಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಕಾರಿ ದುರ್ಗೇಶ ರುದ್ರಾಕ್ಷಿ, ಉಪವಿಭಾಗಾಕಾರಿ ಎಚ್. ಜಯಾ, ಪಿಯು ಡಿಡಿಪಿಐ ಶಶಿಧರ ಪೂಜಾರಿ, ಜಿಲ್ಲಾ ಖಜಾನೆ ಅಕಾರಿ ಬನ್ನಿದಿನ್ನಿ, ಪರೀಕ್ಷಾ ನೋಡಲ್ ಅಕಾರಿ ಪೊಲೀಸ್, ತಹಸೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯಅೀಕ್ಷಕರು, ಪೊಲೀಸ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಪರೀಕ್ಷಾ ವೇಳಾ ಪಟ್ಟಿ
ಜೂ.21ರಂದು ಗಣಿತ, 24ರಂದು ವಿಜ್ಞಾನ, 25ರಂದು ಕನ್ನಡ, 26ರಂದು ಸಮಾಜ ವಿಜ್ಞಾನ, 27ರಂದು ಇಂಗ್ಲಿಷ್ ಹಾಗೂ 28ರಂದು ಹಿಂದಿ ವಿಷಯದ ಪರೀಕ್ಷೆಗಳು ನಡೆಯಲಿವೆ. ಕೋರ್ ಸಬ್ಜೆಕ್ಟ್ ಮತ್ತು ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ತೃತೀಯ ಭಾಷೆ ಹಿಂದಿ ಪರೀಕ್ಷೆಗಳು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿವೆ.

Leave a Reply

Your email address will not be published. Required fields are marked *