17.8 C
Bengaluru
Wednesday, January 22, 2020

ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ

Latest News

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಕಾರಿಗೆ ಬೆಂಕಿ, ಜನರು ಪಾರು

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಧಾರವಾಡ-ಗೋವಾ ರಸ್ತೆಯ ಹೊನ್ನಾಪುರ ಬಳಿ ಮಂಗಳವಾರ ಸಂಭವಿಸಿದೆ....

ಬಾಗಲಕೋಟೆ: ನ್ಯಾಷನಲ್ ಪೆನ್ಶನ್ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ನೌಕರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಕಣಬೂರ ಮಾತನಾಡಿ, ದೇಶಾದ್ಯಂತ 22 ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಉದ್ದೇಶದಿಂದ ನೌಕರರಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಗಿದೆ. ಅದರಂತೆ ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿನ ರಕ್ತ ಭಂಡಾರದಲ್ಲಿ ಎನ್‌ಪಿಎಸ್ ನೌಕರರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದೇವೆ. ಸರ್ಕಾರಗಳು ನಮ್ಮ ನೋವು ಅರ್ಥ ಮಾಡಿಕೊಳ್ಳಬೇಕು. ಎನ್‌ಪಿಎಸ್ ಯೋಜನೆಯಿಂದ ನೌಕರರು ಅಭದ್ರತೆಯಲ್ಲಿ ಜೀವನ ಕಳೆಯುವಂತಾಗಿದೆ. ಕೂಡಲೇ ಅದನ್ನು ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪದಾಧಿಕಾರಿಗಳಾದ ಅರವಿಂದ ಅಣ್ಣಿಗೇರಿ, ಕಮಲಾಕ್ಷಿ ಗಾಣಿಗೇರ, ಸುರೇಶ್ ಉಪ್ಪಲದಿನ್ನಿ, ಸಂಗಮೇಶ್ವರ ಪಾಟೀಲ, ಗೋವಿಂದ ಯಂಗಾಲಿ, ಮಹೇಶ ತೋಟದ, ಸಂತೋಷ ಗೋಗಿ, ಎಂ.ಎಸ್. ಬಡಿಗೇರ, ಬಸವರಾಜ ಬಾದವಾಡಗಿ, ಪ್ರೇಮಾ ಕೊಡ್ಡಣ್ಣವರ ಸೇರಿ ಇತರರು ಇದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...