ಬಸವ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ

Latest News

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಚಿಕ್ಕಮಗಳೂರು: ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಅಯ್ಯಪ್ಪ ಸ್ವಾಮಿ ಮೂರ್ತಿಯನ್ನು ಸಕಲ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಬಸವನಹಳ್ಳಿ ಶ್ರೀ...

ಕರ್ನಾಟಕದ 250 ಥಿಯೇಟರ್​ಗಳಲ್ಲಿ ದಬಂಗ್ ರಿಲೀಸ್!

ಡಿಸೆಂಬರ್ 20ಕ್ಕೆ ಸಲ್ಮಾನ್ ಖಾನ್ ನಟನೆಯ ‘ದಬಂಗ್ 3’ ಸಿನಿಮಾ ಬಿಡುಗಡೆ ಆಗುತ್ತಿದೆ. ಇಷ್ಟು ದಿನ ಹಿಂದಿ ಭಾಷೆಯಲ್ಲಷ್ಟೇ ಅಬ್ಬರಿಸುತ್ತಿದ್ದ ಸಲ್ಮಾನ್, ಈ...

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಬಾಗಲಕೋಟೆ: ವಿಶ್ವಗುರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಕಣವಿ ವೀರಭದ್ರೇಶ್ವರ ಟ್ರಸ್ಟ್, ಅಕ್ಕನ ಬಳಗ, ಕದಳಿ ವೇದಿಕೆ, ಶರಣ ಸಾಹಿತ್ಯ ಪರಿಷತ್, ಶಿವಾನುಭವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸೇರಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಅದ್ದೂರಿ ಮೆರವಣಿಗೆ ಜರುಗಿತು.

ಬಿವಿವಿ ಸಂಘದ ಆವರಣದಲ್ಲಿರುವ ಬೀಳೂರು ಅಜ್ಜನ ಗುಡಿಯಿಂದ ಆರಂಭವಾದ ಮೆರವಣಿಗೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಜಯ ಗುರು ಬಸವ… ಬಸವೇಶ್ವರ ಮಹಾರಾಜಕೀ ಜೈ… ಎನ್ನುವ ಘೋಷಣೆ ಮೊಳಗಿದವು. ಮೆರವಣಿಗೆ ಕಾಲೇಜು ರಸ್ತೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ಅಲ್ಲಿ ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ನಂತರ ಎಂ.ಜಿ.ರೋಡ್ ಮೂಲಕ ವಲ್ಲಭಭಾಯಿ ಚೌಕ್, ಅಡತ ಬಜಾರ್, ಟೀಕಿನಮಠ ಮಾರ್ಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಃ ಬೀಳೂರು ಅಜ್ಜನ ಗುಡಿ ತಲುಪಿತು. ಮೆರವಣಿಗೆಯಲ್ಲಿದ್ದ ಎತ್ತಿನ ಬಂಡಿಯಲ್ಲಿ ಬಸವಣ್ಣನವರ ಭಾವಚಿತ್ರ, ಕುಂಭ ಹಾಗೂ ಆರತಿ ಹಿಡಿದ ಮಹಿಳೆಯರು ಹಾಗೂ ಭಜನೆ, ಕರಡಿ ಮಜಲುಗಳ ವಾದ್ಯ ಮೇಳಗಳು ಜನರನ್ನು ಆಕರ್ಷಿಸಿದವು. ಕುದುರೆ ಮೇಲೆ ಸಾಗಿದ ಬಸವ ವೇಷಧಾರಿ ಗಮನ ಸೆಳೆದರು. 80 ಜೋಡಿ ಎತ್ತುಗಳು ಭಾಗವಹಿಸಿ ಮೆರಗು ತಂದವು. ಕನ್ನಡ ಬಾವುಟ ರಾರಾಜಿಸಿದ್ದು ವಿಶೇಷವಾಗಿತ್ತು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಮಂಡಳಿ ಕಾರ್ಯಾಧ್ಯಕ್ಷೃ ಸಿದ್ದಣ್ಣ ಶೆಟ್ಟರ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷೃ ಅಶೋಕ ಸಜ್ಜನ, ಸದಸ್ಯರಾದ ಮಲ್ಲಪ್ಪ ಅರಬ್ಬಿ, ವೀರಣ್ಣ ಹಲಕುರ್ಕಿ, ಬಸವರಾಜ ಹಿರೇಮಠ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷೃ ಎಂ.ಎಸ್. ಜಿಗಜಿನ್ನಿ, ಶರಣ್ಣಪ್ಪ ಗುಳೇದ, ಜಿ.ಎನ್.ಪಾಟೀಲ, ಸಂಗಯ್ಯ ಸರಗಣಾಚಾರಿ, ಡಾ.ಬಿ.ಎಚ್.ಕೆರೂಡಿ, ಸದಾನಂದ ನಾರಾ, ರಾಜು ಮುದೆನೂರ, ಸುರೇಶ ಮಜ್ಜಗಿ ಸೇರಿ ಇತರರು ಇದ್ದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....