ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಅಗತ್ಯ

ಬಾಗಲಕೋಟೆ: ಬಾಲ ಕಾರ್ಮಿಕರಾಗಲು ಬಡತನ, ಅಸ್ಪಶ್ಯತೆ, ಅನಿಷ್ಟ ಪದ್ಧತಿಗಳೇ ಕಾರಣ. ಇದು ಸಮಾಜಕ್ಕೆ ಶಾಪವಾಗಿ ಪರಿಣಮಿಸಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲರಿಗೂ ಶಿಕ್ಷಣ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಕಟ್ಟಿ ಹೇಳಿದರು.

ಜಿಪಂ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಹಲವಾರು ಕಾಯ್ದೆ, ಕಾನೂನು ಜಾರಿಗೆ ತಂದಿದ್ದರೂ ಬಾಲಕರನ್ನು ದುಡಿಸಿಕೊಳ್ಳುವ ಪ್ರವೃತ್ತಿ ಕಂಡು ಬರುತ್ತಿರುವುದು ವಿಷಾದನೀಯ ಎಂದು ಕಳವಳ ವ್ಯಕ್ತಪಡಿಸಿದರು.

ಕುಟುಂಬದ ಆದಾಯ ಹೆಚ್ಚಿಸುವ ಮನೋಭಾವನೆಯಿಂದ ಪಾಲಕರು ಬಾಲ್ಯದಲ್ಲಿಯೇ ಮಕ್ಕಳನ್ನು ಕೆಲಸಕ್ಕೆ ಕಳಿಸಲು ಮುಂದಾಗುತ್ತಾರೆ. ಅಂತಹ ಪಾಲಕರಿಗೆ ತಿಳಿವಳಿಕೆ ನೀಡುವ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ವೃತ್ತಿಯಲ್ಲಿ ತೊಡಗಿಸಿದರೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ. ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿದ್ದು, ಎಲ್ಲ ಮಕ್ಕಳು ಶಿಕ್ಷಣ ಪಡೆದುಕೊಳ್ಳಬೇಕು. ಇದರಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಗುಲಾಬ ನದಾಫ್ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದ್ದು, ಪಾಲಕರಲ್ಲಿ ಈ ಬಗ್ಗೆ ಪ್ರಜ್ಞೆ ಮೂಡಿಸಬೇಕು ಎಂದರು. ಪ್ರೊ.ಬಸವರಾಜ ಕುಬಕಡ್ಡಿ ಉಪನ್ಯಾಸ ನೀಡಿದರು.

ಇದೇ ವೇಳೆ ಪ್ರತಿಜ್ಞಾವಿ ಬೋಸಲಾಯಿತು. ಅಪರ ಜಿಲ್ಲಾಕಾರಿ ದುರ್ಗೇಶ ರುದ್ರಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಕಾರ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಜಿಲ್ಲಾ ಕಾರ್ಮಿಕ ಅಕಾರಿ ಬಿ.ಆರ್. ಜಾಧವ, ವಕೀಲರ ಸಂಘದ ಅಧ್ಯಕ್ಷ ಸಿ.ಬಿ. ಪಾಟೀಲ ಇತರರು ಇದ್ದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸ್ವಾಗತಿಸಿ, ನಿರೂಪಿಸಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಾರಿಯಾಗಿರುವ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ತಪ್ಪಿತಸ್ಥರ ಮೇಲೆ ಕ್ರಮ ಆಗುತ್ತಿಲ್ಲ. ಹೀಗಾಗಿ ಶಾಶ್ವತವಾಗಿ ಬಾಲ ಕಾರ್ಮಿಕ ಪದ್ಧತಿ ದೂರವಾಗಿಲ್ಲ. ಪೋಷಕರಲ್ಲಿ ಅರಿವಿನ ಜತೆಗೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಪಾಲಕರು, ಪೋಷಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು.
ತೇಜಸ್ವಿನಿ ಹಿರೇಮಠ (ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ)

Leave a Reply

Your email address will not be published. Required fields are marked *