More

    27, 28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

    ಬಾಗಲಕೋಟೆ: ಜಿಲ್ಲೆಯಲ್ಲಿ ೆ.27 ಮತ್ತು 28 ರಂದು ಹಮ್ಮಿಕೊಂಡಿರುವ ಬಾಗಲಕೋಟೆ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ನೂತನ ವೆಬ್‌ಸೈಟ್‌ಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಅಂಗವಾಗಿ ರೂಪಿಸಲಾದ ಹೊಸ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದೆ ಎಂದರು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಂದಾಜು 3 ಸಾವಿರಕ್ಕಿಂತ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಿದ್ದಾರೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ನೂತನ ಉದ್ಯೋಗ ಮೇಳದ ವೆಬ್‌ಸೈಟ್‌ನಲ್ಲಿ ೆ.25 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08354-235337, ಮೊ.ನಂ. 87229 14903, 95381 62203ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಎನ್‌ಐಸಿಯ ಗಿರಿಯಾಚಾರ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಾಂತಾ ಕಡಿ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ವಿ.ಎಸ್. ಹಿರೇಮಠ, ಜಿಲ್ಲಾ ಕೌಶಲ ಇಲಾಖೆ ವ್ಯವಸ್ಥಾಪಕ ಎನ್.ಎಸ್. ಏರಗೂಡಿ, ಸಹಾಯಕ ನಿಯಂತ್ರಕ ಕೋಳೂರ ಇತರರು ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts