More

    ಕೇಂದ್ರದ ಮೇಲೆ ಒತ್ತಡ ಹಾಕಿ

    ಬಾಗಲಕೋಟೆ: ರಾಜ್ಯಕ್ಕೆ ಅಗತ್ಯವಿರುವ 1860 ಕೆ.ಎಲ್. ಆಕ್ಸಿಜನ್ ಅವಶ್ಯಕತೆ ಇದೆ. ಕೂಡಲೇ ರಾಜ್ಯ ಸರ್ಕಾರ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷೃದ ನಾಯಕ ಎಸ್.ಆರ್.ಪಾಟೀಲ ಆಗ್ರಹಿಸಿದರು.

    ನಗರದ ಜಿ.ಪಂ. ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಕ್ಸಿಜನ್‌ದಿಂದ ರಾಜ್ಯದಲ್ಲಿ ಬಹಳಷ್ಟು ಸಮಸ್ಯೆ ಉಂಟಾಗುತ್ತಿದೆ. ಕರ್ನಾಟಕಕ್ಕೆ ಒಟ್ಟು 1860 ಕೆ.ಎಲ್. ಆಕ್ಸಿಜನ್ ಅವಶ್ಯಕತೆ ಇದೆ. 860 ಕೆ.ಎಲ್. ಮಾತ್ರ ಪೂರೈಕೆಯಾಗುತ್ತಿದೆ. ಹೀಗೆ ಮುಂದುವರಿದರೇ ಪರಿಸ್ಥಿತಿ ಕಠಿಣವಾಗಲಿದೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹಾಕಿ ಆಕ್ಸಿಜನ್ ಪೂರೈಕೆ ಮಾಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

    ಇಂತಹ ಕಠಿಣ ಸಂದರ್ಭದಲ್ಲಿ ವಿರೋಧ ಪಕ್ಷದಗಳು ಸುಮ್ಮನೆ ಕೂಡುವದಿಲ್ಲ. ನಮ್ಮ ಪ್ರಭಾವವನ್ನು ಬಳಸುತ್ತೇವೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಅಗತ್ಯವಾಗಿರುವ ಲಸಿಕೆ, ಇತರೆ ಔಷಧಗಳನ್ನು ಪೂರೈಸಬೇಕು ಎಂದು ತಿಳಿಸಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts