More

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ

    ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಕೂಡಲಸಂಗಮದಿಂದ ಆರಂಭಗೊಂಡಿರುವ ಪಾದಯಾತ್ರೆ ಫೆ.21 ರಂದು ಬೆಂಗಳೂರು ತಲುಪಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಅರಮನೆ ಮೈದಾನದಲ್ಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಣ್ಣ ಹಂಪನಗೌಡರ ಹೇಳಿದರು.

    ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ವಚನಾನಂದ ಸ್ವಾಮೀಜಿ ಸಮಾವೇಶದ ನೇತೃತ್ವ ವಹಿಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯಿಂದ 35 ಸಾವಿರ ಜನ ಸೇರಿ ರಾಜ್ಯದ ವಿವಿಧ ಭಾಗದಿಂದ 10 ಲಕ್ಷ ಹೆಚ್ಚು ಜನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಪಂಚಮಸಾಲಿ ಸಮಾಜ ರಾಜ್ಯದಲ್ಲಿ 90 ಲಕ್ಷ ಜನ ಸಂಖ್ಯೆ ಹೊಂದಿದೆ. ಶೇ.90 ರಷ್ಟು ಜನರು ಕೃಷಿ, ಕಾರ್ಮಿಕ ಕೆಲಸ ಮಾಡುತ್ತಿದ್ದಾರೆ. ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗ ಕಲ್ಪಿಸುವುದು ಸರ್ಕಾರದ ಹೊಣೆಯಾಗಿದೆ. ಹೀಗಾಗಿ ಪಂಚಮಸಾಲಿ ಸಮಾಜವನ್ನು ರಾಜ್ಯದಲ್ಲಿ 2 ಎ, ಕೇಂದ್ರದಲ್ಲಿ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಬೇಕು ಎಂದು ಆಗ್ರಹಿಸಿ ಕೂಡಲಸಂಗಮದಿಂದ ಜ.14 ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ವಿವಿಧೆಡೆ ಪಾದಯಾತ್ರೆ ಸಂಚರಿಸಿದ ವೇಳೆ ಉತ್ತಮ ಬೆಂಬಲ ದೊರೆತಿದೆ. ಫೆ.21 ರಂದು ಬೆಂಗಳೂರು ತಲುಪಲಿದೆ ಎಂದರು.

    ಮೀಸಲಾತಿ, ಸಮಾಜದ ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿವಿಧ ಭಾಗದಲ್ಲಿ ಇನ್ನಷ್ಟು ಪೀಠಗಳನ್ನು ಸ್ಥಾಪಿಸಬೇಕು ಎನ್ನುವುದು ಸಮಾಜದ ಆಶಯವಾಗಿದೆ. ಹಿಂದುಳಿದಿರುವ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಸಮಾಜದ ಮುಖಂಡರಾದ ಬಸವರಾಜ ರಾಜೂರ, ನಾಗರಾಜ ಕೊಟಗಿ, ನಿಂಗಪ್ಪ ಕೋಟಿ, ಮಲ್ಲಿಕಾರ್ಜುನ ಸಕ್ರೋಜಿ, ಪ್ರಶಾಂತ ಕಗ್ಗೋಡ, ಚನ್ನವೀರ ಅಂಗಡಿ, ಮಂಜುನಾಥ ಪುರಥಗೇರಿ ಸುದ್ದಿಗೋಷ್ಠಿಯಲ್ಲಿ ಇದ್ದರು.



    ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts