More

    ಸ್ನಾತಕೋತ್ತರ, ಡಿಪ್ಲೋಮಾ ಪ್ರವೇಶ ಪರೀಕ್ಷೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಅ.13 ಮತ್ತು 14 ರಂದು ಸ್ನಾತಕೋತ್ತರ ಮತ್ತು ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಎಲ್ಲ ರೀತಿಯ ಸುರಕ್ಷಿತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯ ಪ್ರವೇಶ ಪರೀಕ್ಷೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಒಟ್ಟು 614 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ ಪಿಜಿ 303, ಡಿಪ್ಲೋಮಾ 311 ವಿದ್ಯಾರ್ಥಿಗಳಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಆರೋಗ್ಯ ಎಸ್‌ಓಪಿ ಮಾರ್ಗಸೂಚಿಯನ್ವಯ ಎಲ್ಲ ರೀತಿಯ ಕ್ರಮಕೈಕೊಳ್ಳುವಂತೆ ಸೂಚನೆ ನೀಡಿದರು.

    ಪರೀಕ್ಷಾ ಕೇಂದ್ರದಲ್ಲಿ ತಪಾಸಣಾ ಕೇಂದ್ರ ಸ್ಥಾಪಿಸಿ ಆರೋಗ್ಯ ಇಲಾಖೆಯ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ, ತುರ್ತು ಕಾರ್ಯಕ್ಕಾಗಿ ಒಂದು ಅಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳು ಸೂಚಿಸಿದರು. ಪರೀಕ್ಷಾ ಮುನ್ನಾ ದಿನ ಪರೀಕ್ಷಾ ಕೊಠಡಿಗಳನ್ನು ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ಯಾನಿಟೈಸ್ ಮಾಡಿಸಬೇಕು. ಸೋಂಕಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯ ಸಿಸಿಸಿ ಕೇಂದ್ರದಲ್ಲಿ ವ್ಯವಸ್ಥೆ ಮಾಡಲು ತಿಳಿಸಿದರು.

    ಪರೀಕ್ಷೆಗೆ ನೇಮಕಗೊಂಡ ವೀಕ್ಷಕರು, ಮಾರ್ಗಾಧಿಕಾರಿಗಳು, ಪ್ರಶ್ನೆ ಪತ್ರಿಕೆ ಪಾಲಕರು, ಕಸ್ಟೋಡಿಯನ್ಸ್‌ಗಳು ಹಾಗೂ ಖಜಾನಾಧಿಕಾರಿಗಳು ತಮ್ಮ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ, ಪ್ರಶ್ನೆ ಪತ್ರಿಕೆ ಸಾಗಾಣಿಕಾ ತಂಡಕ್ಕೆ ಸೂಕ್ತ ಎಸ್ಕಾರ್ಟ ಒದಗಿಸಲು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಸುರಕ್ಷತಾ ದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ ಕಲಂ 144ರ ಅಡಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.

    ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ ಅವರು ಪರೀಕ್ಷೆಗೆ ಕೈಗೊಂಡ ಸಿದ್ದತೆ ಬಗ್ಗೆ ಸಭೆಗೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಸೀಲ್ದಾರ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

    ಪರೀಕ್ಷಾ ವೇಳಾ ಪಟ್ಟಿ
    ಅ.13 ರಂದು ಮಧ್ಯಾಹ್ನ 2.30 ರಿಂದ 4.30 ವರೆಗೆ ಎಂ.ಇ, ಎಂ.ಟೆಕ್, ಅ.14 ರಂದು ಬೆಳಗ್ಗೆ 10.30 ರಿಂದ 12.30 ವರೆಗೆ ಎಂ.ಸಿ.ಎ, ಎಂ.ಬಿ.ಎ ಹಾಗೂ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ವರೆಗೆ ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜರುಗಲಿವೆ.



    ಸ್ನಾತಕೋತ್ತರ, ಡಿಪ್ಲೋಮಾ ಪ್ರವೇಶ ಪರೀಕ್ಷೆ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts