28.5 C
Bengaluru
Monday, January 20, 2020

ಯೂನಿಟ್-2 ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬಾಗಲಕೋಟೆ: ನವನಗರದ ಯೂನಿಟ್-2ರಲ್ಲಿಯ ವಿದ್ಯುತ್ ಕಾಮಗಾರಿಗಳು ಒಂದು ವರ್ಷದ ಅವಧಿಯ ಕಾರ್ಯಗಳಾಗಿದ್ದು, ಅವುಗಳನ್ನು 10 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಶಾಸಕ ಡಾ.ವೀರಣ್ಣ ಚರಂತಿಮಠ ಖಡಕ್ ಸೂಚನೆ ನೀಡಿದರು.

ನವನಗರದ ಯೂನಿಟ್-2ರಲ್ಲಿ ವಿದ್ಯುತ್ ಉಪಕೇಂದ್ರ 1 ಹಾಗೂ 2 ಮತ್ತು ಇತರ ಹೊಸ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ನವನಗರದ ಅಭಿವೃದ್ಧಿಗಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹೆಸ್ಕಾಂ ಸಿವಿಲ್ ಕಾಮಗಾರಿಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಗಮನ ಹರಿಸಲಾಗುವುದು. ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬಿವಿವಿ ಸಂಘದ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿಯಿಂದ (ಥರ್ಡ್ ಪಾರ್ಟಿ) ಪರಿಶೀಲನೆ ಮಾಡಿಸಲಾಗುವುದು. ನಂತರ ಬಿಲ್ ಪಾವತಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.

ನವನಗರದ ಅಭಿವೃದ್ಧಿಗಾಗಿ ತತ್ವರಿ ಗತಿಯಲ್ಲಿ ಕೆಲಸ ಕೈಗೊಳ್ಳಬೇಕು. ಮೂಲ ಸೌಕರ್ಯಗಳಾದ ಮಳೆ ನೀರು ಕೊಯ್ಲು, ಚರಂಡಿ, ನೀರು ಸರಬರಾಜು, ಒಳಚರಂಡಿ, ವಿದ್ಯುತ್ತೀಕರಣ ಹಾಗೂ ರಸ್ತೆ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ದೀಪಾವಳಿ ನಂತರ ನವನಗರದಲ್ಲಿರುವ ಗೂಡಂಗಡಿಗಳನ್ನು ತೆರವುಗೊಳಿಸಿ ಸುಂದರ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು. ಯೂನಿಟ್-3ರ ಕಾರ್ಯವನ್ನು ಕೂಡ ಶೀಘ್ರದಲ್ಲಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಿಟಿಡಿಎ ಅಧೀಕ್ಷಕ ಅಭಿಯಂತರ ಜಿ.ಕೆ.ಗೋಟ್ಯಾಳ ಮಾತನಾಡಿ, 2008-09 ರಲ್ಲಿಯೇ ಬಾಗಲಕೋಟೆ ನಗರವನ್ನು ಸ್ಮಾರ್ಟ್ ಸಿಟಿ ಎಂದು ಶಾಸಕ ಚರಂತಿಮಠ ಅವರ ಅವಧಿಲ್ಲಿ ಘೋಷಿಸಲಾಗಿತ್ತು. ಇಂದು ಅವರೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದು ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಸ್ಮಾರ್ಟ್ ಸಿಟಿ ಆಗಲಿದೆ. ಪಟ್ಟಣದ ಸೀಮಾರೇಖೆ ಆರ್.ಎಲ್. 521ರಿಂದ 523 ಮೀಟರ್‌ವರೆಗೆ ಅಂದರೆ ನೀರು ನಿಂತ ಮಟ್ಟದಿಂದ 100 ಮೀಟರ್ ಒಳಗಡೆ 3149 ಸಂತ್ರಸ್ತ ಕುಟುಂಬಗಳು ಬರುತ್ತಿದ್ದು, ಅದರ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ನವನಗರದ ಯೂನಿಟ್-2 ರಲ್ಲಿ ಪುನರ್ವಸತಿ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.

ಬಿಟಿಡಿಎ ವತಿಯಿಂದ ಲಭ್ಯವಿರುವ 1333 ಎಕರೆ ಪ್ರದೇಶದ ಯೂನಿಟ್-2ರಲ್ಲಿ 52 ಸೆಕ್ಟರ್‌ಗಳನ್ನು ಗುರುತಿಸಲಾಗಿದೆ. 42 ಸೆಕ್ಟರ್‌ಗಳನ್ನು ಪುನರ್ವಸತಿಗಾಗಿ, 6 ಸೆಕ್ಟರ್‌ಗಳನ್ನು ವಾಣಿಜ್ಯ ಮತ್ತು ಉದ್ಯಾನವನಕ್ಕಾಗಿ ಹಾಗೂ ಉಳಿದ 4 ಸೆಕ್ಟರ್‌ಗಳನ್ನು ಸರ್ಕಾರಿ, ಅರೆಸರ್ಕಾರಿ ಹಾಗೂ ಸಂಸ್ಥೆಗಳ ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ. ಯೂನಿಟ್-2ರ ಪಕ್ಕದಲ್ಲಿರುವ ಜಿಲ್ಲಾ ಜೈಲು ಹತ್ತಿರ ಟರ್ನ್ ಕೀ ಆಧಾರದ ಮೇಲೆ 110/11 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ-1ರ ನಿರ್ಮಾಣ ಮಾಡುವ ಕಾಮಗಾರಿ, 10 ನರ್ಸರಿ ಶಾಲೆ ಆವರಣಗಳಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಬಿಟಿಡಿಎ ಮುಖ್ಯ ಅಭಿಯಂತರ ಎ.ಎಲ್.ವಾಸನದ, ಕೆಪಿಟಿಸಿಎಲ್ ಮುಖ್ಯ ಅಭಿಯಂತರ ಎಸ್.ಪಿ.ಸಕ್ರಿ, ಅಧೀಕ್ಷಕ ಅಭಿಯಂತರ ಬಿ.ಎಸ್.ಹೆಬ್ಬಾಳ, ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಆನಂದ, ಬಿಟಿಡಿಎ ಇಂಜಿನಿಯರ್‌ಗಳಾದ ವಿಜಯಶಂಕರ ಹೆಬ್ಬಳ್ಳಿ, ಶಿವು ಶಿರೂರ, ಸುರೇಶ ತೆಗ್ಗಿ, ಎಸ್.ಎಲ್.ಚಿನ್ನಣ್ಣವರ, ಎಂ.ಎನ್.ಗದಗ, ಗುತ್ತಿಗೆದಾರರಾದ ಬೆಂಗಳೂರಿನ ರಾಜೇಂದ್ರಪ್ರಸಾದ್, ಮಹಾವೀರ ಎಲ್., ಯಲ್ಲಪ್ಪ ಕ್ಯಾದಿಗೇರಿ ಸೇರಿ ಇತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...