More

    23 ರಂದು ಬೆಂಗಳೂರು ಚಲೋ

    ಬಾಗಲಕೋಟೆ: ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಕ್ಕೂಟದ ನೇತೃತ್ವದಲ್ಲಿ ಫೆ.23 ರಂದು ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ (ಕ್ಯಾಮ್ಸ್) ಘಟಕದ ಗೌರವ ಅಧ್ಯಕ್ಷ ಎಂ.ಎಸ್.ತೆಗ್ಗಿನಮಠ ತಿಳಿಸಿದರು.

    ಅಂದು ರಾಜ್ಯದ ನಾನಾ ಜಿಲ್ಲೆಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಮಾಲೀಕರು, ಬೋಧಕ, ಬೋಧಕೇತರ ಸಿಬ್ಬಂದಿ ಬೃಹತ್ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿನ 496 ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    2020-21ನೇ ಸಾಲಿನ ಆರ್‌ಟಿಒ ಹಣ ಸರ್ಕಾರ ಒಂದೇ ಕಂತಿನಲ್ಲಿ ಭರಣ ಮಾಡಬೇಕು. ಖಾಸಗಿ ಶಾಲೆಗಳಿಗೆ ನೀಡುತ್ತಿರುವ ಕಿರುಕುಳ ತಪ್ಪಿಸಬೇಕು, ಬೋಧಕ, ಬೋಧಕೇತರ ಸಿಬ್ಬಂದಿಗೆ ಸಹಾಯ ಧನ ನೀಡಬೇಕು. ಕೋವಿಡ್ ನಿಯಮದಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಬೇಕು. ಸಂಕಷ್ಟದಲ್ಲಿರುವ ಸಂಸ್ಥೆಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಪ್ರತಿ ಪಾಲಕ, ಪೋಷಕರಿಂದ ಶೇ.80 ರಷ್ಟು ಬೋಧನಾ ಶುಲ್ಕ ಪಡೆಯಲು ಆದೇಶಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

    ಜಿಲ್ಲೆಯಲ್ಲಿ ಆರ್‌ಟಿಇ ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ಬರಬೇಕಿದ್ದ 18 ಕೋಟಿ ರೂ. ಬಾಕಿ ಉಳಿದಿದೆ. ಕೋವಿಡ್ ಬಂದ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿವೆ. ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ ವೇತನ ನೀಡಲು ಸಾಧ್ಯವಾಗಿಲ್ಲ. ಶೇ.50 ವೇತನ ಮಾತ್ರ ಪಾವತಿಸಲಾಗಿದೆ. ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

    ಒಕ್ಕೂಟದ ಮುಖಂಡರಾದ ಎಸ್.ವಿ. ಬಡಿಗೇರ, ಎಸ್.ಎಂ.ನೀಲಿ, ಎಸ್.ಎಚ್.ಹೂಗಾರ, ಎಸ್.ಎಸ್.ಬಿರಾದಾರ ಸುದ್ದಿಗೋಷ್ಠಿಯಲ್ಲಿ ಇದ್ದರು.



    23 ರಂದು ಬೆಂಗಳೂರು ಚಲೋ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts