18.1 C
Bangalore
Saturday, December 7, 2019

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಪ್ರತಿಭಟನೆ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಬಾಗಲಕೋಟೆ: ರಾಜ್ಯದಲ್ಲಿ 1995ರ ನಂತರ ಆರಂಭವಾದ ಶಾಲೆ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕು ಎಂದು ಆಗ್ರಹಿಸಿ ರಾಜ್ಯ ಖಾಸಗಿ ಶಿಕ್ಷೃಣ ಸಂಸ್ಥೆಗಳ ಆಡಳಿತ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿ, ಪ್ರತಿನಿಧಿಗಳು ಜಿಲ್ಲಾಡಳಿತದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

1995 ರ ನಂತರ ಆರಂಭವಾದ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಸರ್ಕಾರದ ಅನುದಾನ ದೊರೆಯುತ್ತಿಲ್ಲ. ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು, ಇತರ ಸಿಬ್ಬಂದಿಗೆ ಜೀವನ ಭರವಸೆ ಇಲ್ಲದಂತಾಗಿದೆ. 2006-07ರಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು 1987 ರಿಂದ 1995ರ ವರೆಗೆ ಪ್ರಾರಂಭವಾದ ಶಾಲೆ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷೃಕರ ಕುಟುಂಬಗಳಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟಿದ್ದರು. ಸದ್ಯ ಅವರೇ ಮುಖ್ಯಮಂತ್ರಿಯಾಗಿರುವುದರಿಂದ 1995ರ ನಂತರ ಪ್ರಾರಂಭವಾಗಿರುವ ಶಾಲೆ-ಕಾಲೇಜುಗಳಿಗೆ ಅನುದಾನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿವಿಧ ಬೇಡಿಕೆಗೆ ಒತ್ತಾಯ
ಎನ್‌ಪಿಎಸ್ ಹೊಸ ಪಿಂಚಣಿ ವ್ಯವಸ್ಥೆಯಿಂದ ನೌಕರರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಅದನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಕಾಲ್ಪನಿಕ ವೇತನ ಬಡ್ತಿ ಬಸವರಾಜ ಹೊರಟ್ಟಿ ವರದಿ ಯಥಾವತ್ತಾಗಿ ಜಾರಿಗೊಳಿಸಬೇಕು. ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ ನೀಡಬೇಕು. ಜ್ಯೋತಿ ಸಂಜೀವಿನಿ ಜಾರಿಗೊಳಿಸಬೇಕು. ಶಿಕ್ಷಕರ ಅನುಪಾತ 1:50 ಜಾರಿಗೊಳಿಸಬೇಕು ಎಂದು ಶಿಕ್ಷಕರು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಚಂದ್ರಶೇಖರ ಸಾವಳಗಿ, ಎಚ್.ಬಿ. ಬಿರಾದಾರ ಪಾಟೀಲ, ಮುತ್ತು ವಸದ, ಲಕ್ಷ್ಮಣ ಗುರವ, ಬಿ.ಎಸ್. ನ್ಯಾಮಗೌಡರ, ಆರ್.ಎನ್. ಕೊಡಗ, ನಂದಕುಮಾರ ಪಾಟೀಲ, ಎಸ್.ವಿ. ಹಿರೇಮಠ ಇತರರು ಇದ್ದರು.

ಸರ್ಕಾರದ ಗಮನಕ್ಕೆ ತರಲಾಗುವುದು
ಶಿಕ್ಷಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ, ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆ ನ್ಯಾಯ ಸಮ್ಮತವಾಗಿದೆ. ಹಲವು ವರ್ಷಗಳಿಂದ ಶಿಕ್ಷಣ ಸಂಸ್ಥೆಗಳ ಮತ್ತು ಶಿಕ್ಷಕರ ಬೇಡಿಕೆ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

 

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...