ವಿಶ್ವಕರ್ಮರ ಪಾರಂಪರಿಕ ಸಂಸ್ಕೃತಿ ಉಳಿಯಲಿ

Latest News

ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​ ಸ್ಮರಣೀಯವಾಗಿಸಲು ಕೋಲ್ಕತದ ಪ್ರಮುಖ ಕಟ್ಟಡಗಳಲ್ಲಿ ರಾರಾಜಿಸುತ್ತಿವೆ 3D ಮ್ಯಾಪಿಂಗ್​!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆತಿಥೇಯ ಭಾರತ ಮತ್ತು ಪ್ರವಾಸಿ ಬಾಂಗ್ಲಾದೇಶ ಚೊಚ್ಚಲ ಹಗಲು-ಇರುಳು ಟೆಸ್ಟ್​ ಪಂದ್ಯವನ್ನು...

ಅಂದಿನ ಮಂಡ್ಯದ ಸ್ವಾಭಿಮಾನದ ಕಹಳೆ ಇಂದು ಕೆ.ಆರ್​.ಪೇಟೆಗೆ ಶಿಫ್ಟ್​!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೊಳಗಿದ್ದ ಕಹಳೆ ಧ್ವನಿ ಜಿಲ್ಲೆಯಲ್ಲಿ ಮತ್ತೆ ಮೊಳಗಲಿದೆ. ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೊಗ...

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ಬಾಗಲಕೋಟೆ: ಶಿಲ್ಪಕಲೆ, ಚಿತ್ರಕಲೆ, ಬಡಿಗತನ, ಪತ್ತಾರಿಕೆ ಕೌಶಲಗಳನ್ನು ಯಾವ ವಿಶ್ವವಿದ್ಯಾಲಯದಲ್ಲೂ ಕಲಿಸಲ್ಲ. ವಿಶ್ವಕರ್ಮರಲ್ಲಿ ಮಾತ್ರ ಇಂತಹ ವಿಶೇಷ ಕಲೆ ನೋಡಲು ಸಾಧ್ಯ. ಆಧುನಿಕ ಯುಗದಲ್ಲಿ ವಿಶ್ವಕರ್ಮರ ಪಾರಂಪರಿಕ ಸಂಸ್ಕೃತಿಯನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ನಗರದ ಚರಂತಿಮಠ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ವಿಶ್ವಕರ್ಮ ವಿದ್ಯಾ ವಿಕಾಸ ಸಂಸ್ಥೆಯ 30ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮರ ಪಾರಂಪರಿಕ ಸಂಸ್ಕೃತಿಯಲ್ಲಿ ಬರುವ ಮೂಲ ಪಂಚಕಸಬುಗಳನ್ನು ಯಾವ ಶಾಲೆಗಳಲ್ಲೂ ಕಲಿಸಿಕೊಡಲ್ಲ. ಇಂತಹ ಅಮೂಲ್ಯ ಕಲೆಗಳನ್ನು ಉಳಿಸಿ, ಬೆಳೆಸಲು ಸಾರ್ವಜನಿಕರು ಮುಂದಾಗಬೇಕು. ಸಮಾಜದ ಜನತೆಯೂ ಸಹ ದೊಡ್ಡ ಹುದ್ದೆ ಅಲಂಕರಿಸಿದರೂ ಮೂಲ ಕಸಬಿನಿಂದ ವಿಮುಖವಾಗಬಾರದು ಎಂದು ಸಲಹೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಮುಂತಾದ ಯೋಜನೆಗಳ ಮೂಲಕ ಕೌಶಲ, ಜ್ಞಾನ ವಿಕಾಸಕ್ಕೆ ವೇದಿಕೆ ಒದಗಿಸಿದ್ದಾರೆ. ಈ ಯೋಜನೆಗಳ ಸದುಪಯೋಗ ಪಡೆಯಲು ಯುವಕರು ಹೆಚ್ಚಿನ ಗಮನ ಹರಿಸಬೇಕು ಎಂದರು.

ಪ್ರೊ.ಜಗದೇವ ಮರೋಳ, ಪ್ರೊ.ವಿ.ಎನ್. ಕಮ್ಮಾರ ಮಾತನಾಡಿದರು. ಜಗನ್ನಾಥ ಸ್ವಾಮೀಜಿ, ವಿಶ್ವಕರ್ಮ ವಿದ್ಯಾ ವಿಕಾಸ ಸಂಸ್ಥೆ ಅಧ್ಯಕ್ಷ ಈರಣ್ಣ ಪತ್ತಾರ (ಬೇವೂರ), ನಾರಾಯಣ ಸೋನಾರ, ಸಮಾಜದ ನಗರ ಅಧ್ಯಕ್ಷ ನಾಗೇಶ ಬರಗಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪತ್ತಾರ, ಕಾರ್ಯದರ್ಶಿ ಸಂಗಣ್ಣ ಹಡಗಲಿ, ಪಂಚಕಮಿಟಿಯ ವಿ.ವಿ. ಐಹೋಳೆ, ಸುರೇಂದ್ರ ಪತ್ತಾರ, ರಮೇಶ ಪತ್ತಾರ, ಪ್ರಶಾಂತ ಪತ್ತಾರ ಇತರರು ಉಪಸ್ಥಿತರಿದ್ದರು. .ಆರ್. ಪತ್ತಾರ ಸ್ವಾಗತಿಸಿದರು. ಗಣೇಶ ನಾರಾಯಣ ಹಾಗೂ ಬಾಸ್ಕರ ಪತ್ತಾರ ಸಂಗಡಗರು ಪ್ರಾರ್ಥಿಸಿದರು. ಮೌನೇಶ ಪತ್ತಾರ ವಾರ್ಷಿಕ ವರದಿ ಮಂಡಿಸಿದರು. ಮನೋಹರ ಪತ್ತಾರ, ಜಗನ್ನಾಥ ಪತ್ತಾರ ನಿರೂಪಿಸಿದರು.

ಕಲಾವಿದರು, ವಿದ್ಯಾರ್ಥಿಗಳಿಗೆ ಸನ್ಮಾನ
ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದ್ಯಾಮಣ್ಣ ಬಡಿಗೇರ, ಲೋಹ ಶಿಲ್ಪಿ ಮೌನೇಶ ಬಡಿಗೇರ. ಶಿಲ್ಪ ಕಲಾವಿದರಾದ ಮೋಹನ ನಿರುಪಾದಿ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕೃರಿಸಲಾಯಿತು.

ಇಂದಿನ ದಿನಗಳಲ್ಲಿ ಮಾನವನ ಜೀವನ ಪರಿಪೂರ್ಣವಾಗಲೂ ಆತನಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ನೀಡುವುದು ಅಗತ್ಯವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ಭಾರತೀಯ ಸಂಸ್ಕೃತಿ ಉಳಿಸುವ ಮಹತ್ವದ ಕಾರ್ಯವಾಗಬೇಕಿದೆ.
– ಮಳಿಯಪ್ಪಯ್ಯ ಸ್ವಾಮೀಜಿ ಮುರನಾಳ ಜಗದ್ಗುರು ಮಳೆರಾಜೇಂದ್ರಸ್ವಾಮಿ ಮಠ

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...