21 C
Bengaluru
Thursday, January 23, 2020

ಅಪರಾಧಿಗಳಿಗೆ ಸರಿಯಾಗಿ ಶಿಕ್ಷೆಯಾಗುತ್ತಿಲ್ಲ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬಾಗಲಕೋಟೆ: ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳಿಂದ ರಕ್ಷಿಸಲು ಅನೇಕ ಬಲಿಷ್ಠ ಕಾಯ್ದೆಗಳಿದ್ದರೂ ಅಧಿಕಾರಿಗಳು ಪ್ರಕರಣ ಗಂಭೀರವಾಗಿ ಪರಿಗಣಿಸದ ಕಾರಣ ಅಪರಾಧಿಗಳಿಗೆ ಸರಿಯಾಗಿ ಶಿಕ್ಷೆಯಾಗುತ್ತಿಲ್ಲ. ಇದರಿಂದ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಬಿ.ಕಟ್ಟಿ ವಿಷಾದ ವ್ಯಕ್ತಪಡಿಸಿದರು.

ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಬೆಂಗಳೂರು, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ‘ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012’ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌಜನ್ಯಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ (ಪೋಕ್ಸೋ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವೆಸಗುವವರು ಸಾಮಾನ್ಯವಾಗಿ ಮಕ್ಕಳ ಸಂಬಂಧಿಗಳು ಅಥವಾ ಪರಿಚಿತರೇ ಆಗಿರುತ್ತಾರೆ. ಆದ್ದರಿಂದ ಇಂತಹ ಪ್ರಕರಣಗಳ ತನಿಖೆ ನಡೆಸುವ ಅಧಿಕಾರಿಗಳು ಅಪರಾಧಿಯ ಹಿನ್ನಲೆಯನ್ನು ನೋಡಬಾರದು. ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ, ಮಕ್ಕಳ ಸಂಬಂಧಿಯಾಗಿದ್ದರೂ ಅದನ್ನು ಪರಿಗಣಿಸದೇ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಬೇಕು ಎಂದು ಸಲಹೆ ನೀಡಿದರು.

ಕಾನೂನು ಇಲಾಖೆಯ ವಿಶೇಷ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ನಿರ್ದೇಶಕ ಎಚ್.ಕೆ. ಜಗದೀಶ ಮಾತನಾಡಿ, ಭಾರತ ಸರ್ಕಾರ ವಿಶ್ವಸಂಸ್ಥೆಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಮತ್ತು ಆಶಯದಂತೆ ಪೋಕ್ಸೋ ಕಾಯ್ದೆ ಜಾರಿಯಾಗಿದೆ. ಈ ಕಾಯ್ದೆ ಮೇಲೆ ಹೆಚ್ಚಿನ ಬೆಳಕನ್ನು ಚೆಲ್ಲುವುದಕ್ಕಾಗಿ, ತಿಳಿವಳಿಕೆ ಮೂಡಿಸಲು ನಮ್ಮ ಸಂಸ್ಥೆ ರಾಜ್ಯಾದ್ಯಂತ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ. ಭಾಗವಹಿಸಿರುವ ಎಲ್ಲ ಅಧಿಕಾರಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಬಿವಿವಿ ಸಂಘದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಎಂ.ಪಿ.ಚಂದ್ರಿಕಾ ಮಾತನಾಡಿ, ಪೋಸ್ಕೋ ಕಾಯ್ದೆ ಕುರಿತು ಅಧಿಕಾರಿಗಳಿಗೆ ಮತ್ತು ಜನರಿಗೆ ಇನ್ನೂ ಹೆಚ್ಚಿನ ತಿಳಿವಳಿಕೆ ನೀಡುವುದು ಅವಶ್ಯವಾಗಿದೆ. ಅಧಿಕಾರಿಗಳು ತಮಗೆ ಕೆಲಸದ ಒತ್ತಡ ಹೆಚ್ಚಿದೆಯೆಂದು ಇಂತಹ ಪ್ರಕರಣಗಳ ಬಗ್ಗೆ ಅಸಡ್ಡೆ ತೋರದೆ ಪರಿಣಾಮಕಾರಿಯಾಗಿ ಪೋಸ್ಕೋ ಕಾಯ್ದೆಯನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಕಾನೂನು ಇಲಾಖೆ ಅಪರ ಕಾರ್ಯದರ್ಶಿ ಎ.ವಿ.ಶ್ರೀನಾಥ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಬಿ.ಹುಲ್ಲೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎ.ಕೆ. ಬಸಣ್ಣವರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಂಶೋಧನಾ ಮುಖ್ಯಸ್ಥ ಡಾ.ರೇವಯ್ಯ ಒಡೆಯರ, ಹಿರಿಯ ವಕೀಲರಾದ ಕೆ.ಎಸ್.ದೇಶಪಾಂಡೆ, ಎಂ.ಎಂ.ಹಂಡಿ ಸೇರಿ ಇತರರು ಉಪಸ್ಥಿತರಿದ್ದರು. ಸಂಯೋಜಕ ಪ್ರೊ.ಎ.ಬಿ.ಸಿದ್ದನಗೌಡ ಸ್ವಾಗತಿಸಿ ಪರಚಯಿಸಿದರು. ಗೌರಿ ಮಠಪತಿ ಪ್ರಾರ್ಥಿಸಿದರು. ಸುಧೀಂದ್ರ ಕುಲಕರ್ಣಿ ವಂದಿಸಿದರು. ವಿಶ್ವನಾಥ ಕೇಶಗೊಂಡ ನಿರೂಪಿಸಿದರು.

ವಿವಿಧ ಗೋಷ್ಠಿ…
ನಂತರ ನಡೆದ ಗೋಷ್ಠಿಗಳಲ್ಲಿ ಪೋಕ್ಸೋ ಅಧಿನಿಯಮ ಜಾರಿಯಾದ ಹಿನ್ನೆಲೆ, ಉದ್ದೇಶ ಹಾಗೂ ಪಕ್ಷಿನೋಟ ಕುರಿತು ಕಾನೂನು ಇಲಾಖೆ ಅಪರ ಕಾರ್ಯದರ್ಶಿ ಎ.ವಿ.ಶ್ರೀನಾಥ, ‘ಪೋಕ್ಸೋ ಅಧಿನಿಯಮದಡಿಯಲ್ಲಿ ತನಿಖಾಧಿಕಾರಿಗಳು, ಸಮನ್ವಯ ಅಧಿಕಾರಿಗಳು ಮತ್ತು ಅಭಿಯೋಜಕರ ಜವಾಬ್ದಾರಿ’ ಕುರಿತು ಸರ್ಕಾರಿ ಅಭಿಯೋಜಕ ಸುನೀಲ ಕಿರಸೂರ, ‘ಪೋಕ್ಸೋ ಅಧಿನಿಯಮದ ಪರಿಣಾಮಕಾರಿ ಅನುಷ್ಠಾನದಲ್ಲಿನ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಬೆಂಗಳೂರಿನ ಹಿರಿಯ ಸಿವಿಲ್ ನ್ಯಾಯಾಧೀಶೆ ಸುಧಾ ಸೇತುರಾಮ ಓಂಕಾರ, ಮತ್ತು ‘ದೌರ್ಜನ್ಯಕ್ಕೊಳಗಾದ ಮಕ್ಕಳ ಮನೋಸ್ಥಿತಿ ಅರ್ಥಮಾಡಿಕೊಳ್ಳುವಿಕೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಪಾತ್ರ’ ಕುರಿತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ತೇಜಸ್ವಿನಿ ಹಿರೇಮಠ ಮಾತನಾಡಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...