More

    ಮಹಾಪುರುಷರ ತತ್ವಾದರ್ಶ ಪಾಲಿಸಿ

    ಬಾಗಲಕೋಟೆ: ಶರಣರು, ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಹೇಳಿದರು.

    ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ಮಡಿವಾಳ ಮಾಚಿದೇವರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಶರಣರು ಕಾರ್ಯಕ ನಿಷ್ಠರಾಗಿದ್ದು, ಒಂದೇ ಜಾತಿಗೆ ಸೀಮಿತರಾಗಿರಲಿಲ್ಲ. ಮಡಿವಾಳ ಮಾಚಿದೇವರು ಸಮಾಜದಲ್ಲಿನ ಮೂಡನಂಬಿಕೆ, ಕಂದಾಚಾರವನ್ನು ತೊಡೆದು ಹಾಕಿದ್ದಾರೆ ಎಂದರು.

    ಸಾಹಿತಿ ಎಂ.ಬಿ.ನಾಗರಾಜ್ ಉಪನ್ಯಾಸ ನೀಡಿ, ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿದರು. ಸತ್ಯ, ಶುದ್ಧ ಕಾಯಕದ ಮಹತ್ವ ತಿಳಿಸಿದರು. ನೇರ, ದಿಟ್ಟ, ಉತ್ತರವನ್ನು ಕೊಡುವ ಮೂಲಕ ಅಂತರಂಗದ ಕೊಳೆಯನ್ನು ತೆಗೆದು ಹಾಕಿ ವೀರಭದ್ರ ಅವತಾರ ಹೊಂದಿದವರು. ಸಮಾಜದಲ್ಲಿ ಜಾತಿ ಮುಖ್ಯವಲ್ಲ, ಜೀವನ ಮುಖ್ಯ ಎಂದು ತಿಳಿಸಿಕೊಟ್ಟಿದ್ದಾರೆ.

    ಮಣ್ಣಿಗೆ ಸಂಸ್ಕಾರ ಕೊಟ್ಟಲ್ಲಿ ಮಡಿಕೆಯಾಗಿ, ಲೋಹಕ್ಕೆ ಸಂಸ್ಥಾರ ನೀಡಿದಲ್ಲಿ ಆಭರಣವಾಗಿ, ನೀರಿ ಸಂಸ್ಕಾರ ನೀಡಿದಲ್ಲಿ ತೀರ್ಥವಾಗಿ ಹೇಗೆ ಪರಿವರ್ತನೆಗೊಳ್ಳುತ್ತವೆಯೋ ಹಾಗೆಯೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಇದರಲ್ಲಿ ತಾಯಿಂದರ ಪಾತ್ರ ದೊಡ್ಡದಿದೆ. ಮನೆಯಲ್ಲಿ, ಮನದಲ್ಲಿ ಜ್ಯೋತಿ ಬೆಳಗುವಂತಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣ, ಆದರ್ಶ ಸಂಸ್ಕಾರ ನೀಡಬೇಕು ಎಂದರು.

    ಭಾವಚಿತ್ರ ಮೆರವಣಿಗೆ
    ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭವಾದ ಮಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆಗೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ನವನಗರದ ಬಸ್ ನಿಲ್ದಾಣ, ಎಲ್‌ಐಸಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಭವನ ತಲುಪಿ ಮೆರವಣಿಗೆ ಮುಕ್ತಾಯಗೊಂಡಿತು. ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ ಸೇರಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts