25.7 C
Bangalore
Sunday, December 15, 2019

ಕಬ್ಬಿನ ಬಾಕಿ ಹಣ ಪಾವತಿಸಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬಾಗಲಕೋಟೆ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾಗ ಕಬ್ಬಿನ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ನೀಡಬೇಕಾಗದ ಬಾಕಿ ಹಣ ಪಾವತಿ ಕುರಿತಂತೆ ಸರ್ಕಾರದ ಹಂತದಲ್ಲಿ ನಡೆದ ಚರ್ಚೆಯ ತೀರ್ಮಾನಗಳಂತೆ ಕಾರ್ಯರೂಪಕ್ಕೆ ತರುವ ಕೆಲಸ ಜಿಲ್ಲಾಡಳಿತದ್ದಾಗಿದ್ದು, ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ತುರ್ತಾಗಿ ಪಾವತಿಸಬೇಕು. ಪಾವತಿಯಾದ ಬಗ್ಗೆ ಗೂಗಲ್ ಸ್ಪ್ರೇಡ್ ಶೀಟ್‌ನಲ್ಲಿ ಪ್ರತಿ 15 ದಿನಗಳಿಗೊಮ್ಮೆ ಮಾಹಿತಿ ನೀಡಬೇಕು ಎಂದು ಹೇಳಿದರು.

ರೈತರಿಗೆ ಇನ್ನೂ ಸಹ ಹಣ ಪಾವತಿಸದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಸಂಪೂರ್ಣವಾಗಿ ರೈತರ ಬಾಕಿ ಹಣ ಪಾವತಿಸಲೇಬೇಕು. ನಾಯನೇಗಲಿಯ ಇಐಡಿ ಪ್ಯಾರಿ (ಇಂಡಿಯಾ ಲಿ.) ಕಾರ್ಖಾನೆಯವರು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿ ನೀಡಬೇಕಾದ ಬೆಲೆಯನ್ನು ಇನ್ನೂ ಘೋಷಿಸದಿರುವುದು ಸರಿಯಲ್ಲ. ಸಭೆಯಲ್ಲಿ ಬೆಲೆಯನ್ನು ತಿಳಿಸಿ ಪಾವತಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಹೆಚ್ಚುವರಿ ಬೆಲೆ ಸಂದಾಯ ಮಾಡಿ
2016-17ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಘೋಷಿಸಿದ ಹೆಚ್ಚುವರಿ ಬೆಲೆ ಸಂದಾಯದಲ್ಲಿ ಜೆಮ್ಸ್ ಶುಗರ್ಸ್‌ 922.968 ಲಕ್ಷ ರೂ., ಮುಧೋಳದ ನಿರಾಣಿ ಶುಗರ್ಸ್‌ 732.366 ಲಕ್ಷ ರೂ., ಪ್ರಭುಲಿಂಗೇಶ್ವರ ಶುಗರ್ಸ್‌ 803.417 ಲಕ್ಷ ರೂ., ರೈತರ ಸಹಕಾರಿ ಸಕ್ಕರೆ ಕಾರ್ಖಾನೆ 288.885 ಲಕ್ಷ ರೂ. ಬಾಕಿ ಇದ್ದು, ಕೂಡಲೇ ಸಂದಾಯ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

2017-18ನೇ ಹಂಗಾಮಿನ ಕಬ್ಬಿನ ಬಾಕಿ ಬಹುತೇಕ ಕಾರ್ಖಾನೆಗಳು ಡಿಸೆಂಬರ್‌ವರೆಗೆ ಬಾಕಿ ಪಾವತಿಸಿದ್ದು, ಕಾರ್ಖಾನೆಗಳು ಘೋಷಿಸಿದ ಹೆಚ್ಚುವರಿ ಬೆಲೆಯ ಹಣ ಪಾವತಿಸಬೇಕು. ಎಲ್ಲ 11 ಕಾರ್ಖಾನೆಗಳು 17821.45 ಲಕ್ಷ ರೂ. ಬಾಕಿ ಹಣವನ್ನು ಕಡ್ಡಾಯವಾಗಿ ಪಾವತಿಸಬೇಕು. 2018-19ನೇ ಹಂಗಾಮಿಗೆ ಎ್ಆರ್‌ಪಿ ಹಾಗೂ ಸಕ್ಕರೆ ಕಾರ್ಖಾನೆಯವರು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಪಾವತಿಸುತ್ತಿರುವ ದರದ ವ್ಯತ್ಯಾಸದ ಬಾಕಿ ಹಣವನ್ನೂ ಸಹ ಮಾರ್ಚ್ ಅಂತ್ಯಕ್ಕೆ ಸಂಪೂರ್ಣ ಹಣ ಸಂದಾಯ ಮಾಡಿ ಎಕ್ಸೆಲ್ ಶೀಟ್ ಪಾರಮ್ಯಾಟ್‌ನಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.

ಎಥನಾಲ್ ಉತ್ಪಾದನೆ ಹೆಚ್ಚಿಸಿ
ಭಾರತ ಸರ್ಕಾರ ಪೆಟ್ರೋಲಿಯಂ ಕಚ್ಚಾ ತೈಲದ ಆಮದನ್ನು ಕಡಿಮೆ ಮಾಡಲು ಹಾಗೂ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಎಥನಾಲ್ ಮಿಶ್ರಿತ ಪೆಟ್ರೋಲ್‌ನ್ನು ಸರಬರಾಜು ಮಾಡುವ ಕಾರ್ಯ ಆರಂಭಿಸಿದ್ದು, ಜಿಲ್ಲೆಯಲ್ಲಿನ ಎಲ್ಲ ಕಾರ್ಖಾನೆಗಳು ಎಥನಾಲ್ ಉತ್ಪಾದನೆ ಹೆಚ್ಚಿಸಲು ಜಿಲ್ಲಾಧಿಕಾರಿ ಹೇಳಿದರು.

ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಲು ಡಿಸ್ಟಿಲರಿ ಸ್ಪಾಪನೆಗೆ ಮುಂದಾಗಲು ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಘೋಷಿಸಿರುವ ಆರ್ಥಿಕ ಸೌಲಭ್ಯ ಪಡೆಯಲು ಉಂಟಾಗುವ ವಿಳಂಬ ನೀತಿ ತಡೆಗಟ್ಟಲು ಏಕ ಗವಾಕ್ಷಿ ಪದ್ಧತಿ ಮೂಲಕ ನಿಗದಿತ ಅವಧಿಯಲ್ಲಿ ಅನುಮತಿ ನೀಡುವ ಸಲುವಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಒಂದು ವಾರದಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ರಭುಲಿಂಗೇಶ್ವರ ಶುಗರ್ಸ್‌, ನಿರಾಣಿ ಶುಗರ್ಸ್‌, ಜೆಮ್ ಕಾರ್ಖಾನೆಗಳು ಆರಂಭಿಸಿದ್ದು, ಉಳಿದ ಎಲ್ಲ ಕಾರ್ಖಾನೆಯವರು ಎಥನಾಲ್ ಹೆಚ್ಚಿನ ಉತ್ಪಾದನೆ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಶಾಂತೇಶ ಕಮತರ, ವಾಯು ಮಾಲಿನ್ಯ ನಿಯಂತ್ರಣಾಧಿಕಾರಿ ಮನಿಯಾರ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜಯ್ಯ, ಬೆಳಗಾವಿಯ ಕಾರ್ಖಾನೆಗಳ ಸಹಾಯ ನಿರ್ದೇಶಕಿ ಭಾರತಿ ಮಗದುಮ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...