17.8 C
Bengaluru
Wednesday, January 22, 2020

ಶೈಕ್ಷಣಿಕ ಚಟುವಟಿಕೆ ಕೇಂದ್ರವಾಗಲಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬಾಗಲಕೋಟೆ: ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಸಮಾಜದಲ್ಲಿ ಬದಲಾವಣೆ ತರಲು, ಮೌಲ್ಯಯುತ ಮಾನವೀಯ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.

ನಗರದಲ್ಲಿ ಎಪಿಎಂಸಿ ಕ್ರಾಸ್ ಸಮೀಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಮಹಾಮಂಡಳದಿಂದ ನಿರ್ಮಿಸಿರುವ ಪದವಿ ಪೂರ್ವ ಕಾಲೇಜುಗಳ ನೌಕರರ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಕರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಈ ಭವನ ಸದಾ ಶಿಕ್ಷಣ ಚಟುವಟಿಕೆ ಕೇಂದ್ರ ಬಿಂದುವಾಗಬೇಕು. ಮೋಜು, ಮಸ್ತಿ, ಹರಟೆಯ ವೇದಿಕೆ ಆಗಬಾರದು. ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಾಗಲು, ಶಿಕ್ಷಕರಿಗೆ ತರಬೇತಿ, ಕಾರ್ಯಾಗಾರ ನಡೆಸುವುದು ಇಲ್ಲಿನ ಪ್ರಮುಖ ಆದ್ಯತೆಗಳಲ್ಲಿ ಒಂದಾಗಬೇಕು ಎಂದು ಸಲಹೆ ನೀಡಿದರು.

ಶಿಕ್ಷಕನಾಗಿ ಎಷ್ಟು ವರ್ಷ, ಯಾವ ಸ್ಥಳದಲ್ಲಿ ಸೇವೆ ಸಲ್ಲಿಸಿದೆ ಎಂಬುವುದು ಮುಖ್ಯವಾಗುವುದಿಲ್ಲ. ಎಷ್ಟು ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಚೆಲ್ಲಿದೆ, ಯಾವ ರೀತಿ ಬದಲಾವಣೆ ತಂದೆ ಎಂಬುದು ಮುಖ್ಯ. ಮನುಷ್ಯ ಎಲ್ಲರನ್ನು ಮರೆಯಬಹುದು. ಆದರೆ, ಜ್ಞಾನ ದಾಸೋಹ ಉಣಬಡಿಸಿದ ಗುರುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಮಹಾಮಂಡಳದ ಅಧ್ಯಕ್ಷ ಜಿ.ಎಸ್. ಬಿಜಾಪುರ ಮಾತನಾಡಿ, ಭವನದಲ್ಲಿ ನಿರಂತರವಾಗಿ ಒಂದಿಲ್ಲೊಂದು ಶೈಕ್ಷಣಿಕ ಚಟುವಟಿಕೆ ನಡೆಯಬೇಕು. ಪದವಿ ಪೂರ್ವ ಶಿಕ್ಷಕರ ಸಂಘಟನೆ ಬಲಗೊಳ್ಳಬೇಕು. ಶಿಕ್ಷಕರ ಸಮಸ್ಯೆ, ನೋವುಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಬೇಕು. 65 ಲಕ್ಷದಲ್ಲಿ ನಿರ್ಮಾಣಗೊಂಡಿರುವ ಭವನದಲ್ಲಿ ಬಡ ಪಾಲಕರ ಪಾಲು ಇದೆ. ಪ್ರಾಚಾರ್ಯರ ಸಭೆ, ವಿಷಯ ಕಾರ್ಯಾಗಾರ ಹಾಗೂ ಪರೀಕ್ಷೆ ಕೆಲಸಗಳು ಸೇರಿ ಅನೇಕ ಕೆಲಸಗಳನ್ನು ಮಾಡುವ ಮೂಲಕ ಭವನ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸಲಿದೆ ಎಂದು ತಿಳಿಸಿದರು.

ಮತಗಿಯ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ, ಉಪನ್ಯಾಸಕರಾದ ಆರ್.ಬಿ.ಸಂಕದಾಳ, ಎಸ್.ಬಿ.ಮಡಿವಾಳರ, ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಜಿ.ಸನ್ನಿ, ಆರ್.ಎಸ್.ದಡ್ಡಿ, ಬಿ.ಎಸ್.ಪಾಟೀಲ ಇತರರು ಇದ್ದರು.

ಯಾವ ಉದ್ದೇಶಕ್ಕಾಗಿ ಭವನ ನಿರ್ಮಿಸಲಾಗಿದೆ ಅದೇ ಉದ್ದೇಶಕ್ಕೆ ಬಳಕೆಯಾಗಬೇಕು. ವಿನಾಕಾರಣ ಕಾಲಹರಣ ಮಾಡಲು ಇಲ್ಲಿ ಅವಕಾಶ ನೀಡಬಾರದು. ಭವನದಲ್ಲಿ ವಿಷಯ ಗೋಷ್ಠಿ, ಕಾರ್ಯಾಗಾರ, ತರಬೇತಿ ನಿರಂತರವಾಗಿ ನಡೆಯಬೇಕು.
– ಎಂ.ಎಸ್.ಅಂಗಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಬಾಗಲಕೋಟೆ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...