22.5 C
Bengaluru
Sunday, January 19, 2020

ಮಠಾಧೀಶರಗಿಂತ ಶಿಕ್ಷಕರು ಪವಿತ್ರರು

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಬಾಗಲಕೋಟೆ: ಸಮಾಜವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತು ಕಾವಿ ತೊಟ್ಟಿರುವ ಮಠಾಧೀಶರಗಿಂತ ಗುರುವಿನ ಸ್ಥಾನದಲ್ಲಿರುವ ಶಿಕ್ಷಕರು ಪವಿತ್ರರು ಎಂದು ಕನಕಗಿರಿ ಸುವರ್ಣಗಿರಿ ವಿರಕ್ತಮಠದ ಡಾ.ಚನ್ನಮಲ್ಲ ಸ್ವಾಮೀಜಿ ಹೇಳಿದರು.

ಕಮತಗಿ ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ಜರುಗಿದ ಪ್ರಸಕ್ತ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ದೀಪದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಿಕ್ಷಕರು ಮತ್ತು ಶಿಕ್ಷಣ ಕೋರ್ಸ್‌ಗಳನ್ನು ಅಧ್ಯಯನ ಮಾಡಿ ಭಾವಿ ಶಿಕ್ಷಕರಾಗುವವರು ವಿದ್ಯಾವಂತರು ಎಂಬ ಅಹಂಕಾರದಿಂದ ಬೀಗಬಾರದು. ಬಹಳಷ್ಟು ವಿನಯತೆ, ನೈತಿಕತೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಮಾತ್ರ ಉತ್ತಮ ಸಮಾಜ ನಿರ್ಮಿಸಲು ನಿಮ್ಮಿಂದ ಸಾಧ್ಯ. ಜ್ಞಾನಕ್ಕೆ ವಿನಯಬೇಕು, ವಿನಯವಂತರಿಗೆ ಜ್ಞಾನ ಫಲ ನೀಡುತ್ತದೆ. ಪಡೆದುಕೊಂಡ ಜ್ಞಾನವನ್ನು ಸಮರ್ಪಕವಾಗಿ ಸಮಾಜಕ್ಕೆ ಹಂಚಿಕೆಯಾಗಬೇಕು. ಅಂದಾಗ ಮಾತ್ರ ಅದಕ್ಕೊಂದು ಸಾರ್ಥಕತೆ ಬರುತ್ತದೆ ಎಂದರು.

ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಪ್ರೊ.ಪಿ.ಜಿ. ತಡಸದ ಮಾತನಾಡಿ, ಇಂದಿನ ಶಿಕ್ಷಣ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆಗಳು ಆಗುತ್ತಿವೆ. ಭಾವಿ ಶಿಕ್ಷಕರು ಕ್ಷಣ ಕ್ಷಣದ ಬದಲಾವಣೆಗಳನ್ನು ಗಮನಿಸಿ ಅವುಗಳಿಗೆ ಹೊಂದಿಕೊಂಡು ಮುನ್ನಡೆಯುವ ಛಲಗಾರಿಕೆ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಜ್ಞಾನವನ್ನು ಅಹಂಕಾರದಿಂದ ನೀಡದೇ ಪ್ರಾಂಜಲ ಮನಸ್ಸಿನಿಂದ ಧಾರೆ ಎರೆಯಬೇಕು. ಅಧ್ಯನಶೀಲರಾಗಿ, ಬೋಧನಾ ಶೈಲಿಯನ್ನು ವಿಶಿಷ್ಟವಾಗಿ ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಮತಗಿ-ಕೋಟೆಕಲ್ಲ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಸಂಘದ ಉಪಾಧ್ಯಕ್ಷೆ ಗಂಗಮ್ಮ ಗೌಡರ, ಕಾರ್ಯದರ್ಶಿ ಬಸವರಾಜ ಕುಮಚಗಿ, ಸಹ ಕಾರ್ಯದರ್ಶಿ ವಿದ್ಯಾಧರ ಮಳ್ಳಿ, ಪ್ರಾಚಾರ್ಯ ಡಾ.ಎಸ್.ಎಂ. ರೆಡ್ಡಿ ಹಾಗೂ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಎ.ಎಚ್. ಮಲಘಾಣ, ವಿದ್ಯಾರ್ಥಿ ಒಕ್ಕೂಟದ ವಿಜಯಲಕ್ಷ್ಮೀ ದ್ಯಾವಣ್ಣವರ, ಅಕ್ಷತಾ ಈಳಗೇರ ಇದ್ದರು.

ಸಾಧಕರಿಗೆ ಸನ್ಮಾನ
ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಾದ ಸೌಮ್ಯ ದೇಸಾಯಿ, ಅಶ್ವಿನಿ ಅರವಟಗಿಮಠ, ಆಯಿಷಾ ಸೂಳಿಭಾವಿ, ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸಿ ಹುಚ್ಚೇಶ್ವರ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಲಕ್ಷ್ಮೀ ಹಡಪದ ಅವರನ್ನು ಸನ್ಮಾಸಲಾಯಿತು.

ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ, ತ್ಯಾಗ ಅಡಕವಾಗಿರುತ್ತದೆ. ವ್ಯವಹಾರಿಕ ಮನೋಗುಣವಿರುವುದಿಲ್ಲ. ಹೀಗಾಗಿ ಇಂತಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅಕ್ಷರ, ಅರಿವು ಮತ್ತು ಅನ್ನ ಸಿಗುತ್ತದೆ.
– ಡಾ.ಚನ್ನಮಲ್ಲ ಸ್ವಾಮೀಜಿ ಸುವರ್ಣಗಿರಿ ವಿರಕ್ತಮಠದ, ಕನಕಗಿರಿ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...