More

    ತಾಂತ್ರಿಕ ಸಂಯೋಜಕರಿಗೆ ತರಬೇತಿ ಕಾರ್ಯಾಗಾರ

    ಬಾಗಲಕೋಟೆ: ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಉದ್ದೇಶದಿಂದ ತಾಂತ್ರಿಕ ಸಂಯೋಜಕರು ಹಾಗೂ ಸಹಾಯಕರಿಗೆ ಸರ್ಕಾರ CLART ಆ್ಯಪ್ ತಂತ್ರಾಂಶ ಬಳಸಿ ಕಾಮಗಾರಿಗಳ ಗುಚ್ಛ ತಯಾರಿಸಲು ತರಬೇತಿ ನೀಡಲಾಗುತ್ತಿದ್ದು, ತಂತ್ರಾಂಶಗಾರರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಐಎಸ್ ಬೇಸಿಕ್ ಪ್ಲಾನಿಂಗ್ ಅಳವಡಿಸಿಕೊಂಡು ಕಾಮಗಾರಿಗಳ ಗುಚ್ಛ ತಯಾರಿಸುವಲ್ಲಿ ಅಐಂಖಖಿ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ತುರ್ತು ಕಾಮಗಾರಿಗಳ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಇಲ್ಲಿವರೆಗೆ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಲು ಮತ್ತು ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

    ಕೇವಲ ಉದ್ಯೋಗ ಮಾತ್ರವಲ್ಲದೆ ಜನಸಾಮಾನ್ಯರ ಜೀವನ ಉತ್ತಮ ಮಟ್ಟಕ್ಕೆ ಈ ಉದ್ಯೋಗ ಖಾತ್ರಿ ಯೋಜನೆ ತೆಗೆದುಕೊಂಡು ಹೋಗುತ್ತದೆ. ಉದ್ಯೋಗ ಖಾತ್ರಿ ಯೋಜನೆ ಎಂದರೆ ಕಾಮಧೇನು ಕಲ್ಪವೃಕ್ಷವಿದ್ದಂತೆ. ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಅರಿತುಕೊಂಡು ಯೋಜನೆ ಜಾರಿಯಲ್ಲಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ನಮ್ಮ ಜಿಲ್ಲೆಗೆ ಕಳೆದ ವರ್ಷ 38 ಲಕ್ಷ ರೂ. ಅನುದಾನ ಬಂದಿದ್ದು, ಈ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಲಾಗುವುದು ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಧನಶೇಖರ ಪಿ., ನರೇಗಾ ಯೋಜನೆಯ ಎಲ್ಲ ತಾಂತ್ರಿಕ ಸಿಬ್ಬಂದಿ ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts