More

    ರೊಟ್ಟಿ ಹಿಡಿದು ವಿನೂತನ ಪ್ರತಿಭಟನೆ

    ಬಾಗಲಕೋಟೆ: ಜಿಲ್ಲೆಯ ತೇರದಾಳದಲ್ಲಿರುವ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿರುವ ರೈತರಿಗೆ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತ ಭವನ ಎದುರು ಸೋಮವಾರ ರೊಟ್ಟಿ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರೈತರು ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಬಳಿಕ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು. ಮನೆಯಿಂದ ತಂದಿದ್ದ ರೊಟ್ಟಿ ಬುತ್ತಿ ಊಟ ಮಾಡಿ ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಿದರು.

    ಪ್ರತಿಭಟನಾ ಸಭೆಯ ಉದ್ದೇಶಿ ಮುಖಂಡರಾದ ಅರವಿಂದ ದಳವಾಯಿ ಮಾತನಾಡಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಬಹಳಷ್ಟು ರೈತರು ಕಳೆದ 2 ವರ್ಷಗಳ ಹಿಂದೆ ತೇರದಾಳದಲ್ಲಿರುವ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಷ್ಟಪಟ್ಟು ಬೆಳೆದ ಕಬ್ಬು ಕಾರ್ಖಾನೆಗೆ ನೀಡಿದ್ದಾರೆ. ಕಬ್ಬು ಪೂರೈಸಿದ 15 ದಿನಗಳೊಳಗೆ ರೈತರ ಬಿಲ್ ಪಾವತಿಸಬೇಕೆಂಬ ಕಾನೂನಿದ್ದರೂ ಕೂಡಾ ಇದುವರೆಗೂ ರೈತರ ಖಾತೆ ಹಣ ಜಮೆಯಾಗಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಸಿದರು.

    ಇನ್ನು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಮತ್ತು ಜಿಲ್ಲಾಧಿಕಾರಿಗಳು ಕಾರ್ಖಾನೆಯ ಮುಖ್ಯಸ್ಥರೊಂದಿಗೆ ಮಾತನಾಡಿ ಎಚ್ಚರಿಸಿದ್ದರೂ ಯಾವುದೇ ರೀತಿಯ ಪರಿಹಾರ ರೈತರಿಗೆ ತಲುಪಿಲ್ಲ. ನ್ಯಾಯಾಲಯ ರೈತರ ಪರವಾಗಿ ಕಾರ್ಖಾನೆಯ ಚರ ಮತ್ತು ಸ್ಥಿರಾಸ್ತಿಗಳನ್ನು ಹರಾಜು ಮಾಡಿ ಬಂದ ಹಣದಿಂದ ರೈತರ ಬಾಕಿ ಬಿಲ್ ಪಾವತಿಸುವಂತೆ ಆದೇಶ ನೀಡಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಕಾರ್ಖಾನೆಯ ಆಸ್ತಿಯನ್ನು ಜಪ್ತಿ ಮಾಡಿ, ಹರಾಜು ಪ್ರಕ್ರಿಯೆ ಆರಂಭಿಸಬೇಕು ಎನ್ನುವುದರೊಳಗೆ ಕಾರ್ಖಾನೆಗೆ ಸಾಲ ನೀಡಿದ ಬ್ಯಾಂಕಿನವರಿಂದ ಈ ಪ್ರಕ್ರಿಯೆಗೆ ತಡೆ ತಂದಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.

    ಕರವೇ ಸಂಘಟನೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿತು. ಜಿ.ಪಂ. ಉಪಾಧ್ಯಕ್ಷ ಗೋವಿಂದ ಕಾರಜೋಳ, ಎನ್.ಬಿ. ದಾನನ್ನವರ, ಎಚ್.ಕೆ. ಹುರಕಡ್ಲಿ, ಎಂ.ಎಸ್. ಮಿರಜಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

    ಡಿಸಿಎಂ ಕಾರಜೋಳಗೆ ಮುತ್ತಿಗೆ
    ಇನ್ನು ಈ ವೇಳೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ರೈತರು ಮುತ್ತಿಗೆ ಹಾಕಿದರು. ರೈತರ ಬಾಕಿ ಪಾವತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಗೋವಿಂದ ಕಾರಜೋಳ ಸರ್ಕಾರ ಎಲ್ಲವನ್ನು ಕೊಡಿಸಲು ಸಾಧ್ಯವಿಲ್ಲ ಎನ್ನುತ್ತಿದ್ದಂತೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮಧ್ಯಸ್ಥಿಕೆ ವಹಿಸಿ ನಮ್ಮ ನೋವಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮುತ್ತಿಗೆ ಹಾಕಿದ ರೈತರನ್ನು ಚದುರಿಸಲು ಪೊಲೀಸರು ಮಧ್ಯಪ್ರವೇಶ ಮಾಡಿದಾಗ ರೈತರು ಹಾಗೂ ಪೊಲೀಸರ ನಡುವೆ ಮಾತಿನಚಕಮಕಿ ನಡೆಯಿತು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts