More

    ಡಿಸಿ ಕಚೇರಿ ಎದುರು ಪ್ರತಿಭಟನೆ

    ಬಾಗಲಕೋಟೆ: ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಪ್ರತಿಭಟನಕಾರರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.

    ದೇಶದಲ್ಲಿ ಈಚೆಗೆ ಅತ್ಯಾಚಾರ ಘಟನೆಗಳು ವ್ಯಾಪಕ ಪ್ರಮಾಣದಲ್ಲಿ ನಡೆಯುತ್ತಿದೆ. ಅದರಲ್ಲೂ ಉತ್ತರ ಪ್ರದೇಶದಂತ ರಾಜ್ಯದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಘಟನೆಗಳು ನಡೆದು ನಾಗರಿಕ ಸಮಾಜ ತೆಲೆ ತಗ್ಗಿಸುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಣ್ಣುಮುಚ್ಚಿ ಕುಳಿತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಸಂಘಟನೆ ಮುಖಂಡರಾದ ಪರಶುರಾಮ ಕಾಂಬಳೆ, ಬಸವರಾಜ ಹಳ್ಳದಮನಿ, ರವಿ ಕಾಂಬಳೆ, ರಮೇಶ ಅನಗವಾಡಿ, ಬಸವರಾಜ ಪಾತ್ರೋಟ, ಕಾಸಿಂಅಲಿ ಗೋಠೆ, ಬಸವರಾಜ ಪಾತ್ರೋಟಿ, ಶಿವಾನಂದ ಸಿಂಗೆ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts