More

    ಅಭಿವೃದ್ಧಿಯಲ್ಲಿ ರಾಜಕಾರಣ ಸಲ್ಲ

    ಬಾಗಲಕೋಟೆ: ದೇಶದ ಪ್ರಗತಿ ಹಳ್ಳಿಗಳಲ್ಲಿ ಅಡಗಿದೆ. ಗ್ರಾಮಗಳ ಅಭಿವೃದ್ಧಿಗೆ ಗ್ರಾ.ಪಂ ಸದಸ್ಯರಿಗೆ ಒತ್ತು ನೀಡಬೇಕು. ಚುನಾವಣೆಯಲ್ಲಿ ಬಂದಾಗ ರಾಜಕೀಯ ಮಾಡೋನ. ಆದರೇ ಅಭಿವೃದ್ಧಿಯಲ್ಲಿ ರಾಜಕಾರಣ ಸಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

    ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಶನಿವಾರ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಗ್ರಾಮೀಣ ಪ್ರದೇಶದಲ್ಲಿ ಪ್ರಗತಿಯ ಪರ್ವ ಶುರುವಾಗಿದೆ. ಕೇಂದ್ರ, ರಾಜ್ಯ ಸರ್ಕಾರದಿಂಧ ನಾನಾ ಯೋಜನೆಗಳ ಮೂಲಕ ಅನುದಾನ ಹರಿದು ಬರುತ್ತಿದೆ. ಅದರ ಸದುಪಯೋಗ ಪಡೆದುಕೊಂಡು ಸೇವೆ ಮಾಡಬೇಕು. ಶಾಲಾ ಕಪೌಂಡ, ಅಂಗನವಾಡಿ, ಶುದ್ಧ ಕುಡಿಯುವ ನೀರಿನ, ಕೆರೆಗಳ ಅಭಿವೃದ್ಧಿ ಮಾಡಬೇಕು ಎಂದರು.

    ಪ್ರಧಾನಿ ನರೇಂದ್ರ ಮೋದಿ 9 ಕೋಟಿ ಜನ ರೈತರಿಗೆ 18 ಸಾವಿರ ಕೋಟಿಯಷ್ಟು ಹಣವನ್ನು ಕೇವಲ ಹತ್ತು ನಿಮಿಷದಲ್ಲಿ ಖಾತೆಗೆ ಜಮೆ ಆಗುವಂತೆ ಮಾಡುವ ಕೆಲಸ ಮಾಡಿದ್ದಾರೆ. ಕೋವಿಡ್ ಸಂಕಷ್ಟದಲ್ಲಿಯೂ ಅಭಿವೃದ್ಧಿಗೆ ಹಿಂದೇಟು ಹಾಕಿಲ್ಲ. ಇದನ್ನು ವಿರೋಧ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಪ್ರಧಾನ ಮಂತ್ರಿ ನರೇಂದ್ರ ಕನಸು ನನಸಾಗಿಸಲು ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಕೆಲಸ ನಿರ್ವಹಿಸಬೇಕು. ತಮ್ಮ ಗ್ರಾಮಗಳ ಅಭಿವೃದ್ಧಿಗೆ ಪಣತೊಡಬೇಕು. ಎಲ್ಲರು ಒಗ್ಗಟ್ಟಾಗಿ ಗ್ರಾಮಗಳ ಸ್ವಚ್ಛತೆ, ಮೂಲ ಸೌಕರ್ಯ ಒದಗಿಸಲು ಒತ್ತು ನೀಡಬೇಕು. ಅಭಿವೃದ್ಧಿ ವಿಷಯದಲ್ಲಿ ಯಾರು ಹೆದರುವ ಅಗತ್ಯವಿಲ್ಲ ಎಂದು ಸಲಹೆ ನೀಡಿದರು.

    ಮಾಜಿ ಶಾಸಕ ಪಿ.ಎಚ್.ಪೂಜಾರ ಮಾತನಾಡಿ, ನಗರಕ್ಕೆ ಮಾತ್ರ ಸೀಮಿತವಾಗಿದ್ದ ಬಿಜೆಪಿ ಪಕ್ಷವನ್ನು ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿ ಪಕ್ಷ ಬಲಿಷ್ಠಗೊಳಿಸಿದರು. ಪರಿಣಾಮ ದೇಶದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದು ನಿಂತಿದೆ. 22 ಗ್ರಾ.ಪಂ.ಪೈಕಿ 18 ರಲ್ಲಿ ಬಿಜೆಪಿ ಬೆಂಬಲಿತರು ಗ್ರಾ.ಪಂ.ಅಧಿಕಾರ ಹಿಡಿದಿದ್ದು ನೂತನ ಸದಸ್ಯರ ಜವಾಬ್ದಾರಿ ಹೆಚ್ಚಾಗಿದೆ ಎಂದರು.

    ವಿಧಾನ ಪರಿಷತ್ತ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿದರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ಕಾರ್ಯದರ್ಶಿ ರಾಜಶೇಖರ ಮುದೇನೂರ, ಮಾಧ್ಯಮ ವಕ್ತಾರ ಜಯಂತ ಕುರಂದವಾಡ, ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ, ಬಿಟಿಡಿಎ ಸದಸ್ಯ ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ಎಪಿಎಂಸಿ ಅಧ್ಯಕ್ಷ ಕೃಷ್ಣಾ ನಾಯಕ, ಮುಖಂಡರಾದ ಪ್ರಭುಸ್ವಾಮಿ ಸರಗಣಾಚಾರಿ, ಸಂಗಣ್ಣ ಕಲಾದಗಿ, ಈರಪ್ಪ ಐಕೂರ, ವೀರಣ್ಣ ಹಳೇಗೌಡರ ಉಪಸ್ಥಿತರಿದ್ದರು.

    ಬಿಜೆಪಿ ಪಕ್ಷವು ಜನರ ಭಾವನೆ ಅರಿತು ಕೆಲಸ ಮಾಡುತ್ತದೆ. ಬಾಗಲಕೋಟೆ ಮತಕ್ಷೇತ್ರದಲ್ಲಿ ಬಿಜೆಪಿ 2015 ರ ಚುನಾವಣೆಯಲ್ಲಿ 5 ಗ್ರಾ.ಪಂ ಅಧಿಕಾರಕ್ಕೆ ಬಂದಿತ್ತು. 2020 ಚುನಾವಣೆಯಲ್ಲಿ 18 ಗ್ರಾ.ಪಂಗಳಲ್ಲಿ ಅಧಿಕಾರ ಚುಕ್ಕಾಣೆ ಹಿಡಿದಿದ್ದಾರೆ. ಇದ್ದಕ್ಕೆ ಬಿಜೆಪಿ ಪಕ್ಷದ ಬದ್ಧತೆ, ಜನರು ಇಟ್ಟಿರುವ ಪ್ರೀತಿ ಕಾರಣ.
    – ರಾಜು ರೇವಣಕರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ



    ಅಭಿವೃದ್ಧಿಯಲ್ಲಿ ರಾಜಕಾರಣ ಸಲ್ಲ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts