More

    ಮಿಂಚಿನ ನೋಂದಣಿ ಅಭಿಯಾನಕ್ಕೆ ಡಿಸಿ ಡಾ.ರಾಜೇಂದ್ರ ಚಾಲನೆ

    ಬಾಗಲಕೋಟೆ: ಮತದಾರರ ಪಟ್ಟಿಯಲ್ಲಿ 18 ರಿಂದ 19 ವಯಸ್ಸಿನ ವಿದ್ಯಾರ್ಥಿಗಳ ಹೆಸರುಗಳನ್ನು ಸೇರ್ಪಡೆ ಮಾಡಲು ಜ.6 ರಿಂದ 8ರವರೆಗೆ ಹಮ್ಮಿಕೊಂಡಿರುವ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಚಾಲನೆ ನೀಡಿದರು.

    ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೋಮವಾರ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ನೊಂದಣಿ ಕಾರ್ಯ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. 2020 ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡು ಚುನಾವಣೆ ಸಂದರ್ಭದಲ್ಲಿ ತಮ್ಮ ಹಕ್ಕನ್ನು ಚಲಾಯಿಸುವಂತಾಗಬೇಕು ಎಂದರು.

    ನಮೂನೆ 6ನ್ನು ಪಡೆದುಕೊಂಡು ಭರ್ತಿ ಮಾಡಿ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಆಯಾ ತಹಸೀಲ್ದಾರ್ ಮತ್ತು ಬಿಎಲ್‌ಒಗಳಿಗೆ ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಹಾಗೂ ಹೋಬಳಿ ಮಟ್ಟದಲ್ಲಿ ಬಿಎಲ್‌ಒಗಳಿಗೆ ಅರ್ಜಿ ಸಲ್ಲಿಸಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾಲೇಜು ವಿದ್ಯಾರ್ಥಿಗಳಲ್ಲಿ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಯುವ ಮತದಾರರು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಜಿಲ್ಲೆಯ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಕಾಲೇಜುಗಳ ಪ್ರಾಚಾರ್ಯರು 18 ವರ್ಷ ಪೂರೈಸಿದ ಪ್ರತಿ ವಿದ್ಯಾರ್ಥಿಗೆ ಹೊಸ ಮತದಾರ ಸೇರ್ಪಡೆಯ ನಮೂನೆ 6ನ್ನು ನೀಡಿ ಅವರಿಂದ ಭರ್ತಿ ಮಾಡಿಸಿ ಭಾವಚಿತ್ರ, ಪೂರಕ ದಾಖಲೆಗಳ ಸಹಿತ ಅರ್ಜಿಗಳನ್ನು ಸಂಗ್ರಹಿಸಬೇಕು. ಸಂಗ್ರಹಿಸಿದ ಅರ್ಜಿಗಳ ಪಟ್ಟಿ ಮಾಡಿ ಅರ್ಜಿ ಮತ್ತು ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಗೆ ನೀಡಿ ಸ್ವೀಕೃತಿ ಪಡೆಯಬೇಕು ಎಂದು ಹೇಳಿದರು.

    ನಂತರ ನವನಗರ ವ್ಯಾಪ್ತಿಯಲ್ಲಿ ಮಿಂಚಿನ ನೋಂದಣಿ ಕುರಿತು ಜಾಥಾ ನಡೆಸಲಾಯಿತು. ಜಾಥಾದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಜಾಗೃತಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಅರಿವು ಮೂಡಿಸಿದರು. ಜಾಥಾದಲ್ಲ್ಲಿ ತಹಸೀಲ್ದಾರ್ ಗುರುಬಸಯ್ಯ ಹಿರೇಮಠ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts