20.4 C
Bengaluru
Sunday, January 19, 2020

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 20 ರಂದು ಅಂಗವಿಕಲರ ಧರಣಿ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬಾಗಲಕೋಟೆ: ವಿಶ್ವ ಅಂಗವಿಕಲರ ದಿನಾಚರಣೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು ಉಳಿದು ಅವಮಾನಿಸಿದ್ದಾರೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.20 ರಂದು ಜಿಲ್ಲಾಡಳಿತ ಭವನ ಎದುರು ನೂರಾರು ಅಂಗವಿಕಲರಿಂದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿ ದಿವ್ಯಾಂಗ ರಾಜ್ಯ ಒಕ್ಕೂಟದ ಕಾರ್ಯದರ್ಶಿ ರಘು ಹುಬ್ಬಳ್ಳಿ ಹೇಳಿದರು.

ಈಚೆಗೆ ಜಿಲ್ಲಾಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು ಉಳಿದು ಅಂಗವಿಕಲರಿಗೆ ಅವಮಾನಿಸಿದ್ದಾರೆ. ಅವರು ತಕ್ಷಣ ಕ್ಷಮೆ ಕೇಳಬೇಕು. ಅಂಗವಿಕಲರ ಸಮಸ್ಯೆ ಪರಿಹರಿಸುವಲ್ಲಿ ನಿರ್ಲಕ್ಷೃ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಶ್ರವಣ ಮತ್ತು ವಾಕ್ ನ್ಯೂನತೆ ಇರುವ ಮಕ್ಕಳ ತಪಾಸಣೆಗಾಗಿ ಮತ್ತು ಆಡಿಯೋ ಮೀಟರ್ ಅಳವಡಿಸಲು ಖಾಸಗಿ ಆಸ್ಪತ್ರೆಯಲ್ಲಿ ಅಧಿಕ ಪ್ರಮಾಣದಲ್ಲಿ ಹಣ ಖರ್ಚು ಆಗುತ್ತಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಆಡಿಯೋ ಮೀಟರ್ ಸೌಲಭ್ಯ ಒದಗಿಸಬೇಕು. ಕೈ ಬೆರಳು- ಕಾಲು ಬೆರಳು ಇಲ್ಲದ ಅಂಗವಿಕಲರು ಆಧಾರ್ ಕಾರ್ಡ್ ಇಲ್ಲದೆ ಸರ್ಕಾರದ ಸೌಲಭ್ಯ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಪ್ರತಿ ತಾಲೂಕಿನಲ್ಲಿ ಶಿಬಿರಗಳನ್ನು ಮಾಡಿ ಆಧಾರ್ ಕಾರ್ಡ್ ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಎಲ್ಲ ಇಲಾಖೆಗಳಲ್ಲಿ 2016ರ ಕಾನೂನಿನ ಪ್ರಕಾರ ಶೇ.5 ರಷ್ಟು ಅನುದಾನವನ್ನು ಅಂಗವಿಕಲರಿಗೆ ಮೀಸಲಿಡಬೇಕು. ಗ್ರಾಪಂ, ತಾಪಂ, ಜಿಪಂ, ಪುರಸಭೆ, ನಗರಸಭೆ, ಕೃಷಿ, ಆರೋಗ್ಯ ಇಲಾಖೆಯಲ್ಲಿ ಅಂಗವಿಕಲರಿಗೆ ಮೀಸಲಿಟ್ಟ ಅನುದಾನ ಬಳಕೆ ಮಾಡುತ್ತಿಲ್ಲ. ಶಾಸಕರ ನಿಧಿಯಲ್ಲಿ ಶೇ.10 ರಷ್ಟು ಹಣವನ್ನು ಅಂಗವಿಕಲರಿಗೆ ಬಳಕೆ ಮಾಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಂಗವಿಕಲರ ಇಲಾಖೆ ಕಚೇರಿಯಲ್ಲಿ ಅಡೆತಡೆ ರಹಿತ ವಾತಾವರಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ವಿಆರ್‌ಡಬ್ಲುೃ ಹಾಗೂ ಎಂಆರ್‌ಡಬ್ಲುೃಗಳನ್ನು ಕಾಯಂಗೊಳಿಸಬೇಕು. ಅಂಗವಿಕಲರಿಗೆ ಪ್ರತ್ಯೇಕವಾದ ಸಚಿವಾಲಯವನ್ನು ರಚಿಸಬೇಕು. ರಾಜ್ಯಾದ್ಯಂತ ಸಂಚರಿಸಲು ಬಸ್‌ಪಾಸ್ ಉಚಿತವಾಗಿ ವಿತರಣೆ ಮಾಡಬೇಕು. 3000 ರೂ. ವರೆಗೆ ಅಂಗವಿಕಲರ ಪಿಂಚಣಿ ಹೆಚ್ಚಿಸಬೇಕು. ಅಂಗವಿಕಲರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಿದ್ದು, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಸಂಗಮೇಶ ಭಾವಿಕಟ್ಟಿ, ಸುರೇಶ ತಳಗೇರಿ, ರಾಜು ತೇರದಾಳ, ಪಾಂಡು ಲಮಾಣಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...