More

    ಬೀಳಗಿ, ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ನೀರಾವರಿ

    ಬಾಗಲಕೋಟೆ: ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ತಾಲೂಕಿನ 16 ಸಾವಿರ ಹೆಕ್ಟೇರ್ ನೀರಾವರಿ ವಂಚಿತ ಪ್ರದೇಶಕ್ಕೆ ನೀರು ಒದಗಿಸುವ ಕೆರೂರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಾದಾಮಿ ಮತ್ತು ಬೀಳಗಿ ವಿಧಾನಸಭೆ ಕ್ಷೇತ್ರದ 16 ಸಾವಿರ ಹೆಕ್ಟೇರ್ ಪ್ರದೇಶಕ್ಕೆ 525 ಕೋಟಿ ರೂ.ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

    ಈ ಯೋಜನೆಗೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ 2 ಟಿಎಂಸಿ ನೀರು ಬಳಕೆ ಮಾಡಲಾಗುತ್ತದೆ. ಕೆರೂರ ಏತನೀರಾವರಿ ಮೊದಲ ಹಂತವಾಗಿ ಮುಖ್ಯ ಕಾಮಗಾರಿಗೆ 310 ಕೋಟಿ ರೂ., ಪಶ್ಚಿಮ ಮುಖ್ಯ ಕಾಲುವೆ ನಿರ್ಮಾಣಕ್ಕೆ 110 ಕೋಟಿ ರೂ., ಪಶ್ಚಿಮ ಮುಖ್ಯ ಕಾಲುವೆ ನಿರ್ಮಾಣಕ್ಕೆ 105 ಕೋಟಿ ರೂ. ಸೇರಿದಂತೆ ಒಟ್ಟು 525 ಕೋಟಿ ಯೋಜನೆ ಇದಾಗಿದ್ದು, ಮೊದಲ ಹಂತದ 310 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಕೊನೆಗೂ ಸರ್ಕಾರ ಹಸಿರು ನಿಶಾನೆ ತೋರಿರುವುದು ಈ ಭಾಗದ ಜನತೆಯಲ್ಲಿ ಮಂದಹಾಸ ಮೂಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.



    ಬೀಳಗಿ, ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ನೀರಾವರಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts