More

    ಕೋವಿಡ್ ಪ್ರಕರಣ ಇಳಿಮುಖ


    ಬಾಗಲಕೋಟೆ: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಹೊಸದಾಗಿ ದೃಢಪಟ್ಟ ಪಾಸಿಟಿವ್ ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯಿಂದ ಜಿಲ್ಲೆಯಲ್ಲಿ 7 ಸಾವಿರದ ವರೆಗೆ ಸೋಂಕು ದೃಢಪಟ್ಟಿದ್ದು, ಸದ್ಯ 2,225 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಕಳೆದ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ.8.19 ಇರುವುದು ಕಂಡುಬಂದಿದೆ. ಇದನೆಲ್ಲ ಗಮನಿಸಿದರೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇನ್ನು ಒಂದು ವಾರದಲ್ಲಿ ಕೋವಿಡ್ ಮುಕ್ತ ಜಿಲ್ಲೆಗೆ ಎಲ್ಲ ರೀತಿಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    59 ಬ್ಲಾೃಕ್ ಫಂಗಸ್ ಪ್ರಕರಣ
    ಜಿಲ್ಲೆಯಲ್ಲಿ ಬ್ಲಾೃಕ್ ಫಂಗಸ್ ಸಂಬಂಧಿಸಿದಂತೆ ಒಟ್ಟು 59 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 4 ಜನ ಮಾತ್ರ ಮೃತಪಟ್ಟಿದ್ದಾರೆ. 29 ಜನ ಬಾಗಲಕೋಟೆ ಜಿಲ್ಲೆಯಲ್ಲಿ, ಉಳಿದ ರೋಗಿಗಳು ಬೇರೆ ಬೇರೆ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಲಾೃಕ್ ಫಂಗಸ್ ಚಿಕಿತ್ಸೆಗೆ ಬೇಕಾದ ಔಷಧಗಳು ಪೂರೈಕೆಯಾಗುತ್ತಿದೆ. 11 ರೋಗಿಗಳಿಗೆ ಶಸ ಚಿಕಿತ್ಸೆಗೆ ಒಳಪಡಿಸಬೇಕಾಗಿದೆ. ಜಿಲ್ಲಾ ಆಸ್ಪತ್ರೆ ಮತ್ತು ಕುಮಾರೇಶ್ವರ ಆಸ್ಪತ್ರೆಗಳಲ್ಲಿ ಶಸ ಚಿಕಿತ್ಸೆ ನಡೆಸಲಾಗುವುದು. ಚಿಕಿತ್ಸೆಗೆ ಸರ್ಜನ್ ತಮ್ಮಲ್ಲಿ ಲಭ್ಯವಿಲ್ಲದಿದ್ದರೆ ಬೇರೆ ಆಸ್ಪತ್ರೆಯಿಂದ ಕರೆಯಿಸಿಕೊಳ್ಳಬೇಕು. ಆದರೆ, ಯಾವುದೇ ಕಾರಣಕ್ಕೂ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಬಾರದು ಎಂದು ನಿರ್ದೇಶನ ನೀಡಿದರು.

    ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ನಿರಾಣಿ ೌಂಡೇಷನ್‌ದಿಂದ ಸ್ಯಾನಿಟೈಸರ್, ಸೋಂಕು ನಿಯಂತ್ರಣ ದ್ರಾವಣವನ್ನು ಉಚಿತವಾಗಿ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಶ್ರಮಿಸುತ್ತಿದೆ. ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಹೊಸದಾಗಿ ದೃಢಪಟ್ಟ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಲಸಿಕೆ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ. ಹೆಲ್ತ್ ವರ್ಕರ್ಸ್‌ ಮತ್ತು ್ರಂಟ್‌ಲೈನ್ ವಾರಿಯರ್ಸ್‌ಗಳಿಗೆ ಲಸಿಕೆ ನೀಡುವುದು ಪೂರ್ಣಗೊಂಡಲ್ಲಿ ಬ್ಯಾಂಕ್ ಸಿಬ್ಬಂದಿಗೆ ಲಸಿಕೆ ನೀಡಬೇಕು. ಮುಂಬರುವ ದಿನಗಳಲ್ಲಿ 3ನೇ ಅಲೆ ಆರಂಭವಾಗಲಿದ್ದು, ಲಸಿಕಾಕರಣ ಪೂರ್ಣಗೊಳಿಸಿದಲ್ಲಿ ಜನರಿಗೆ ಕೋವಿಡ್‌ನಿಂದ ರಕ್ಷಿಸಿದಂತಾಗುತ್ತದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮೂಕವಾಗಬೇಕು ಎಂದು ಹೇಳಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಸದ್ಯ ಜಿಲ್ಲೆಯಲ್ಲಿರುವ ಕೋವಿಡ್ ಮಾಹಿತಿಯನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೋಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಇತರರು ಇದ್ದರು.

    ಕೋವಿಡ್ ಮೂರನೇ ಅಲೆ ಎದುರಿಸಲು ಅಧಿಕಾರಿಗಳು, ವೈದ್ಯರ ಸಜ್ಜಾಗಬೇಕು. ಸರ್ಕಾರ ಅಗತ್ಯವಾದ ಉಪಕರಣ, ಔಷಧ ನೀಡಲಿದೆ. ಮಕ್ಕಳ ಚಿಕಿತ್ಸೆಗೆ ಬೇಕಾದ ಔಷಧ, ಉಪಕರಣದ ಮಾಹಿತಿ ಕೂಡಲೇ ನೀಡಬೇಕು. 3ನೇ ಅಲೆಯ ಬಗ್ಗೆ ನಿಷ್ಕಾಳಜಿ ವಹಿಸಬಾರದು.
    ಉಮೇಶ ಕತ್ತಿ ಜಿಲ್ಲಾ ಉಸ್ತುವಾರಿ ಸಚಿವ

    ಕೋವಿಡ್ ಲಸಿಕೆ ಪಡೆಯಲು ಬಂದವರ ಸ್ಯಾಂಪಲ್ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಲಸಿಕೆ ಪಡೆಯಲು ಜನ ಹಿಂಜರಿಯುತ್ತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕು. ಲಸಿಕೆ ಸರಬರಾಜು ಪ್ರಮಾಣದ ಮಾಹಿತಿ ನಿತ್ಯವು ನೀಡಬೇಕು.
    ಸಿದ್ದು ಸವದಿ ಶಾಸಕ, ಜಿಲ್ಲಾ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts