More

    ಲಸಿಕೆ ಅಭಿಯಾನ ಯಶಸ್ವಿಗೊಳಿಸಿ

    ಬಾಗಲಕೋಟೆ: ಜಿಲ್ಲಾದ್ಯಂತ ಪ್ರತಿ ಬುಧವಾರ ಹಮ್ಮಿಕೊಳ್ಳಲಾದ ಕೋವಿಡ್ ಲಸಿಕೆ ಮೇಳ ಅಂಗವಾಗಿ ನವನಗರದ ವಿವಿಧ ಲಸಿಕೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೆ. ರಾಜೇಂದ್ರ ಭೇಟಿ ನೀಡಿ ಲಸಿಕೆ ಪ್ರಗತಿ ಪರಿಶೀಲಿಸಿದರು.

    ನವನಗರದ ವಾಂಬೆ ಕಾಲನಿಯ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಬೇಕು. ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಅಭಿಯಾನ ಬಹು ಮುಖ್ಯವಾಗಿದೆ. ಪ್ರತಿ ಬುಧವಾರ ಕೋವಿಡ್ ಲಸಿಕೆ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್ ನೀಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರು ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ನಗರಸಭೆ ಆಯುಕ್ತ ವಿ.ಮುನಿಶಾಮಪ್ಪ ಇದ್ದರು.

    ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲಾದ್ಯಂತ ಸೆ. 17 ರಂದು ಬೃಹತ್ ಕೋವಿಡ್-19 ಲಸಿಕೆ ಮೇಳ ಹಮ್ಮಿಕೊಳ್ಳಲಾಗಿದ್ದು, ಅಂದು 75 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಲಸಿಕೆಕಾರಣ ಪ್ರಗತಿಗಾಗಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಸೇರಿ ಒಟ್ಟು 69 ಜನರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಬಾದಾಮಿ ತಾಲೂಕಿಗೆ 12 ಜನ, ಬಾಗಲಕೋಟೆ ತಾಲೂಕಿಗೆ 10, ಬೀಳಗಿ ತಾಲೂಕಿಗೆ 4, ಹುನಗುಂದ ತಾಲೂಕಿಗೆ 17, ಜಮಖಂಡಿ ತಾಲೂಕಿಗೆ 14, ಮುಧೋಳ ತಾಲೂಕಿನಲ್ಲಿ 12 ಜನ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಕೆ.ರಾಜೇಂದ್ರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts