Friday, 16th November 2018  

Vijayavani

Breaking News

ಸಾಲದ ಬಾಧೆಗೆ ನದಿಗೆ ಹಾರಿ ರೈತ ಆತ್ಮಹತ್ಯೆ

Thursday, 14.06.2018, 2:00 PM       No Comments

ಬಾಗಲಕೋಟೆ: ಸಾಲಬಾಧೆಗೆ ಬೇಸತ್ತು ರೈತನೊಬ್ಬ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಾಗಲಕೋಟೆಯ ಬಾದಾಮಿ ಶಿರಬಡಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಫಕೀರಗೌಡ ಬೆಳಗೌಡರ(40) ಮೃತ ರೈತ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಇಂದು ಸ್ಥಳೀಯರು ನದಿಯಲ್ಲಿ ಕಾರ್ಯಾಚರಣೆ ನಡೆಸಿ, ಮೃತ ದೇಹ ಹೊರ ತೆಗೆದಿದ್ದಾರೆ.

ಕಳೆದ ವರ್ಷ ಮುಂಗಾರು ಮತ್ತು ಹಿಂಗಾರು ಬೆಳೆಗಳು ಕೈಕೊಟ್ಟ ಹಿನ್ನಲೆಯಲ್ಲಿ ಫಕೀರಗೌಡ ವಿವಿಧ ಬ್ಯಾಂಕ್ ಗಳಲ್ಲಿ ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top