ವಿಜಯಪುರ: ಕುರುಬ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ನ.29 ರಂದು ಬಾಗಲಕೋಟೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕುರುಬ ಎಸ್‌ಟಿ ಹೋರಾಟ ಸಮಿತಿ ರಾಜ್ಯ ಸಹ ಕಾರ್ಯದರ್ಶಿ ರಾಜು ಬಿರಾದಾರ ತಿಳಿಸಿದರು.
ಈ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯಿಂದ 25 ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಹಾಲುಮತ ಸಮಾಜ ಪರಿಶಿಷ್ಟ ಪಂಗಡ (ಎಸ್.ಟಿ.) ಪಟ್ಟಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಅನೇಕ ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ಹೋರಾಟ ಪ್ರಸ್ತುತ ತೀವ್ರಗೊಳಿಸಲಾಗುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ರವಿ ಕಿತ್ತೂರ ಮಾತನಾಡಿ, ಹಾಲುಮತ ಸಮಾಜ ಎಸ್.ಟಿ. ಪಟ್ಟಿಗೆ ಸೇರಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆ ವಿವಿಧ ಹಂತದ ಹೋರಾಟ ಕೈಗೊಳ್ಳಲಾಗುತ್ತಿದ್ದು, ಎರಡನೇಯ ಹಂತದ ಹೋರಾಟದ ಭಾಗವಾಗಿ ಜ.15 ರಿಂದ ೆ.7 ರವರೆಗೆ ಕಾಗಿನೆಲೆ ಮಹಾಸಂಸ್ಥಾನಪೀಠದ ಗುರುಗಳಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಸುಕ್ಷೇತ್ರ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ವಿವರಿಸಿದರು. ೆ. 7 ರಂದು ಬೆಂಗಳೂರಿನಲ್ಲಿ ಬೃಹತ್ ಸಭೆ ನಡೆಯಲಿದೆ. ಸಮಾವೇಶದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ವಿವರಿಸಿದರು.
ಮುಖಂಡರಾದ ರಾಜಶೇಖರ ಕುರಿಯವರ, ಸಾಬು ಮಾಶ್ಯಾಳ, ರಾಜು ಕಂಬಾಗಿ, ಶಿಲ್ಪಾ ಕುದರಗೊಂಡ, ಕರೆಪ್ಪ ಬಸ್ತಾಳ, ಸಂಗಮೇಶ ಓಲೆಕಾರ ಇನ್ನಿತರರಿದ್ದರು.
29ರಂದು ಬಾಗಲಕೋಟೆಯಲ್ಲಿ ಕುರುಬರ ಸಮಾವೇಶ
ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…
ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips
ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…