28.5 C
Bengaluru
Monday, January 20, 2020

ನ್ಯಾ.ಸದಾಶಿವ ಆಯೋಗ ವರದಿ ಅಂಗೀಕಾರಕ್ಕೆ ವಿಳಂಬ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬಾಗಲಕೋಟೆ: ನ್ಯಾ.ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿ ಅಂಗೀಕರಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದು ಎಂಆರ್‌ಎಚ್‌ಎಸ್ ರಾಜ್ಯ ಉಪಾಧ್ಯಕ್ಷ ಎಂ.ಯು. ಮೂಗನೂರ ಹೇಳಿದರು.

ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ನಡೆದ ಬಾಗಲಕೋಟೆ ತಾಲೂಕು ಮಾದಿಗ, ಸಮಗಾರ, ಮೋಚಿ, ಡೋರ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ನ್ಯಾಯಮೂರ್ತಿ ಸದಾಶಿವ ಆಯೋಗ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅರಿಯಲು ಹಾಗೂ ಸಂವಿಧಾನ ಈ ಸಮಾಜಕ್ಕೆ ನೀಡಿದ ಸೌಲಭ್ಯಗಳು ಎಲ್ಲ ಉಪಜಾತಿಗಳಿಗೆ ತಲುಪಿವೆಯೋ ಎಂಬ ವಿಸ್ತೃತ ವರದಿಯನ್ನು ಅತ್ಯಂತ ಪಾರದರ್ಶಕವಾಗಿ ಸಮೀಕ್ಷೆ ಮಾಡಿದೆ. 2012ರಲ್ಲಿ ವರದಿ ಪಡೆದುಕೊಂಡ ಸರ್ಕಾರ ಈವರೆಗೂ ಅಂಗೀಕರಿಸದಿರುವುದು ಖಂಡನೀಯ ಎಂದರು.

ಪರಿಶಿಷ್ಟರಲ್ಲಿ ಸಾಮಾಜಿಕ ಸಾಮರಸ್ಯ ಮುಂದುವರಿಲು ಸದಾಶಿವ ವರದಿ ಅನುಷ್ಠಾನಗೊಂಡರೆ ಮಾತ್ರ ಸಾಧ್ಯ ಎನ್ನುವುದನ್ನು ಸರ್ಕಾರ ಅರಿತುಕೊಳ್ಳಬೇಕಿದೆ ಎಂದರು.

ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಮುತ್ತಣ್ಣ ಬೆನ್ನೂರ ಮಾತನಾಡಿ, ನ್ಯಾ. ಸದಾಶಿವ ವರದಿ ಪರಿಶಿಷ್ಟರಲ್ಲಿನ ಯಾವುದೇ ಜಾತಿಯನ್ನು ಪಟ್ಟಿಯಿಂದ ಹೊರಹಾಕುವ ಅಥವಾ ಮೀಸಲಾತಿ ಹೆಚ್ಚಿಸುವ ಪ್ರಸ್ತಾಪ ಮಾಡಿಲ್ಲ. ಆದರೆ, ಶಾಸನಬದ್ಧ ಹಾಗೂ ಸಂವಿಧಾನ ಬದ್ಧವಾದ ಸಾಮಾಜಿಕ ನ್ಯಾಯದ ಹೋರಾಟವನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮುಂತ್ರಿಗಳು ಎಡವಿದ್ದಾರೆ ಎಂದು ಆರೋಪಿಸಿದರು.

ಅಸ್ಪಶ್ಯ ಜಾತಿಯ ಮಾದಿಗ ಸಂಬಂಧಿತ 58 ಉಪಜಾತಿಗಳಲ್ಲಿ ಬರುವ ಸಮಗಾರ, ಚಮ್ಮಾರ, ಮೋಚಿ, ಮಚಗಾರ, ಡೋರಕಕ್ಕಯ್ಯ, ಡಕ್ಕಲಿಗರನ್ನು ಗಟ್ಟಿಗೊಳಿಸಿ ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರ ವರದಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡಲು ಆಗ್ರಹಿಸಿ ತೀವ್ರ ಹೋರಾಟ ರೂಪಿಸಲು ರಾಜ್ಯಮಟ್ಟದಲ್ಲಿ ವಿಭಾಗವಾರು ತರಬೇತಿ ಕಾರ್ಯಾಗಾರ ಆಯೋಜಿಸಿದ್ದೇವೆ. ಸಮುದಾಯದ ಜನರು ಇದರ ಪ್ರಯೋಜನ ಪಡೆದುಕೊಂಡು ಮುಂದಿನ ಹೋರಾಟಕ್ಕೆ ಸನ್ನದ್ಧರಾಗಬೇಕಿದೆ ಎಂದು ಸಲಹೆ ನೀಡಿದರು.
ಹೋರಾಟ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಟವಳಿ ಅಧ್ಯಕ್ಷತೆ ವಹಿಸಿದ್ದರು. ನೀಲಕಂಠ ರಾಜಾಪೂರ, ರಾಜು ಮನ್ನಿಕೇರಿ, ಅಡಿವೆಪ್ಪ ಚಂದಾವರಿ ಮಾತನಾಡಿದರು.

ಶಿವಾನಂದ ಬಿಸನಾಳ, ಸತ್ಯಪ್ಪ ದಳವಾಯಿ, ಹನುಮಂತ ದೊಡಮನಿ, ಪರಶುರಾಮ ಸನಕ್ಯಾನವರ, ಹನುಮಂತ ಚಿಮ್ಮಲಗಿ, ಲಕ್ಷ್ಮಣ ಕಮತಗಿ, ಬಾಬು ಬಿಲ್‌ಕೆರೂರ, ದಶರಥ ಚಿಕ್ಕಸಂಶಿ, ಸಿದ್ದನಾಥ ರಾಜಾಪೂರ, ಸಿದ್ದು ದೊಡಮನಿ ಉಪಸ್ಥಿತರಿದ್ದರು. ಮಲ್ಲು ಬೆನಕಟ್ಟಿ ಕ್ರಾಂತಿಗೀತೆ ಹಾಡಿದರು. ಪ್ರಭು ದೊಡ್ಡಮನಿ ಸ್ವಾಗತಿಸಿದರು. ಜಗದೀಶ ಚಿಟಗಿನಕೊಪ್ಪ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...