More

    ಸರ್ಕಾರ ಬೇಡಿಕೆ ಈಡೇರಿಸಲಿ, ಅಂಗನವಾಡಿ ಕಾರ್ಯಕರ್ತರ ಒತ್ತಾಯ

    ಬಾಗಲಕೋಟೆ: ಕಾಲಮಿತಿಯೊಳಗೆ ಉಚಿತವಾಗಿ ವ್ಯಾಕ್ಸಿನ್ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ, ಅಕ್ಷರದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.

    ಕಾಲಮಿತಿಯೊಳಗೆ ಉಚಿತವಾಗಿ ವ್ಯಾಕ್ಸಿನೇಷನ್ ನೀಡಬೇಕು. ಸುರಕ್ಷತಾ ಸಾಧನಗಳನ್ನು ಒದಗಿಸಬೇಕು. ಜೆಡಿಪಿಯ ಶೇ.6 ರಷ್ಟು ಹಣವನ್ನು ಆರೋಗ್ಯ ಇಲಾಖೆಗೆ ಮೀಸಲಿಟ್ಟು, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಹೆಚ್ಚುವರಿಯಾಗಿ ಮಾಸಿಕ 10 ಸಾವಿರ ರೂ. ಕೋವಿಡ್ -19 ಭತ್ಯೆ ನೀಡಬೇಕು. ಕಾರ್ಮಿಕ ವಿರೋಧಿ ಸಂಹಿತೆಗಳನ್ನು ವಾಪಸ್ ಪಡೆಯಬೇಕು. ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಬೇಕು. ವಿಮಾ ಯೋಜನೆಗಳನ್ನು ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರಿಗೆ ವಿಸ್ತರಿಸಬೇಕು. ಮಾಸಿಕ 21 ಸಾವಿರ ರೂ. ಕನಿಷ್ಠ ವೇತನ ನೀಡಬೇಕು. ಎಲ್‌ಐಸಿ ಆಧಾರಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದರು.

    60 ವರ್ಷ ನೆಪವೊಡ್ಡಿ ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆಯಬಾರದು. ಸದ್ಯಕ್ಕೆ ಇರುವ ಆಹಾರದ ಹಕ್ಕು, ಶಿಕ್ಷಣದ ಹಕ್ಕಿನ ಬಗ್ಗೆ ಕಾಯ್ದೆಯಿರುವಂತೆ ಸಾರ್ವತ್ರಿಕ ಆರೋಗ್ಯ ಒದಗಿಸುವ ಬಗ್ಗೆ ಕಾಯ್ದೆ ರೂಪಿಸಬೇಕು, ಸೆಂಟ್ರಲ್ ವಿಸ್ತಾದಂತಹ ಯೋಜನೆಗಳನ್ನು ಕೈ ಬಿಡಬೇಕು, ರಾಜ್ಯ ಸರ್ಕಾರದ 339.45 ಲಕ್ಷ ರೂ. ಅನುದಾನ ಕೂಡಲೇ ಬಿಡುಗಡೆ ಮಾಡಬೇಕು. ನೂತನ ಶಿಕ್ಷಣ ನೀತಿಯಲ್ಲಿ ಐಸಿಡಿಎಸ್, ಬಿಸಿಯೂಟ ಯೋಜನೆಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts