More

    ಹೊಸದಾಗಿ ಕೇವಲ 2 ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ ಮಂಗಳವಾರ ಎರಡು ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಕಳೆದ ಎಂಟು ತಿಂಗಳಿನಲ್ಲಿ ಮಹಾಮಾರಿ ಕೋವಿಡ್ ಸೋಂಕಿತರ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜನತೆ ಕೊಂಚ ನಿರಾಳತೆಗೆ ಜಾರುವಂತಾಗಿದೆ.

    ಇನ್ನು ಕೋವಿಡ್‌ಗೆ ಮತ್ತೊಂದು ಬಲಿಯಾಗಿದ್ದು, 9 ಜನ ಸೋಂಕಿನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ ಇಬ್ಬರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13464 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 13205 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1809 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 185894 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 170110 ನೆಗೆಟಿವ್ ಪ್ರಕರಣ ಹಾಗೂ 134 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 125 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts