More

    ಅನುಪಾಲನಾ ವರದಿ ಸಲ್ಲಿಸದವರಿಗೆ ನೋಟಿಸ್ ನೀಡಿ ; ಬಾಗೇಪಲ್ಲಿ ತಾಪಂ ಅಧಿಕಾರಿಗಳಿಗೆ ಶಾಸಕ ಸುಬ್ಬಾರೆಡ್ಡಿ ಸೂಚನೆ

    ಬಾಗೇಪಲ್ಲಿ: ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸುವ ಅಧಿಕಾರಿಗಳ ಬಳಿ ಸಮರ್ಪಕ ವಾಹಿತಿ ಇಲ್ಲದಿದ್ದರೆ ಸಭೆಗೆ ಬರುವ ಉದ್ದೇಶವಾದರೂ ಏನು? ಎಂದು ಕೆಂಡಾಮಂಡಲರಾದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಅನುಪಾಲನಾ ವರದಿ ಸಲ್ಲಿಸದವರಿಗೆ ನೋಟಿಸ್ ನೀಡಿ ಎಂದು ತಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಪಂ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
    ಪಿಎಂ ಕಿಸಾನ್ ಯೋಜನೆಗೆ 40 ಸಾವಿರ ರೈತರು ಅರ್ಜಿ ಸಲ್ಲಿಸಿದ್ದು, 18,500 ರೈತರು ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆಂದು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ಸಭೆಗೆ ವಾಹಿತಿ ನೀಡಿದಾಗ, ಕೆಡಿಪಿ ಸದಸ್ಯ ಆರ್.ವೆಂಕಟೇಶ್ ಪ್ರತಿಕ್ರಿಯಿಸಿ, ಕಳೆದ ಮೂರು ವರ್ಷಗಳಿಂದ ಕೃಷಿ ಇಲಾಖೆಯ ಹನಿ ನೀರಾವರಿ ಯೋಜನೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ.

    ರೈತರಿಗೆ ಹನಿ ನೀರಾವರಿ ಸಲಕರಣೆಗಳನ್ನು ಸಮರ್ಪಕವಾಗಿ ನೀಡಿಲ್ಲ. ರೈತರು ಈ ಬಗ್ಗೆ ಜಿಲ್ಲಾ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ತನಿಖೆ ನಡೆಸಲು ಮೀನಮೇಷ ಎಣಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಅಧಿಕಾರಿಗಳೊಂದಿಗೆ ಶಾಸಕರೂ ಭಾಗಿಯಾಗಿದ್ದಾರೆ ಎಂದು ಶಾಸಕರ ಗಮನಕ್ಕೆ ತಂದ ಪ್ರಸಂಗ ನಡೆಯಿತು.

    ಶಾಸಕರು ಇದಕ್ಕೆ ಪ್ರತಿಕ್ರಿಯಿಸಿ, ಆರೋಪಗಳು ಏನು ಬೇಕಾದರೂ ವಾಡಬಹುದು ಎಂದಾಗ, ಕೆಲ ರೈತರು ಸಭೆಯಲ್ಲಿ ಸಮಸ್ಯೆ ಬಗ್ಗೆ ವಿವರಣೆ ನೀಡಲು ಮುಂದಾದರು. ಕೆಡಿಪಿ ಸಭೆಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಸಮಸ್ಯೆ ಏನೇ ಇದ್ದರೂ ಅಧಿಕಾರಿಗಳ ಹಂತದಲ್ಲೇ ಚರ್ಚಿಸಲಾಗುತ್ತದೆ ಎಂದು ಶಾಸಕರು ತಿಳಿಸಿದರು. ನಂತರ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಶಾಸಕ ಮಾಹಿತಿ ಪಡೆದುಕೊಂಡರು. ತಹಸೀಲ್ದಾರ್ ಡಿ.ಎ.ದಿವಾಕರ್, ತಾಪಂ ಇಒ ಮಂಜುನಾಥಸ್ವಾಮಿ, ಕೆಡಿಪಿ ಸದಸ್ಯರಾದ ಮಂಜುನಾಥ, ಪ್ರಭಾಕರರೆಡ್ಡಿ, ಸತೀಶ್ ಕುವಾರ್, ಕೆ.ಆರ್.ಪದ್ಮಾವತಿ ಮತ್ತಿತರರು ಇದ್ದರು.

    ಸಿಡಿಪಿಒಗೆ ತರಾಟೆ:ಬಾಗೇಪಲ್ಲಿ ತಾಲೂಕು ವ್ಯಾಪ್ತಿಯಲ್ಲಿ 370ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿದ್ದು, 260 ಕೇಂದ್ರಗಳನ್ನು ಸರ್ಕಾರಿ ಕಟ್ಟಡ, 117 ಕೇಂದ್ರಗಳನ್ನು ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸಲಾಗುತ್ತಿದೆ ಎಂದು ಸಿಡಿಪಿಒ ನಾಗರಾಜು ಸಭೆಗೆ ವಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಸ್ಪಂದಿಸಿ, ಇತರ ಸಂ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸರ್ಕಾರಿ ಅಧಿಕಾರಿ, ಜನಪ್ರತಿನಿಧಿಗಳ ಬಗ್ಗೆ ಹಗುರವಾಗಿ ವಾತನಾಡುವ ಅಂಗನವಾಡಿ ನೌಕರರ ವಿರುದ್ಧ ಕ್ರಮ ಜರುಗಿಸುವಂತೆ ಹಿಂದಿನ ಸಭೆಯಲ್ಲಿ ತೀರ್ವಾನಿಸಲಾಗಿತ್ತು. ಎಷ್ಟು ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಸಿಡಿಪಿಒ ಅವರನ್ನು ಪ್ರಶ್ನಿಸಿದಾಗ ಅವರು ಸಭೆಗೆ ವಾಹಿತಿ ನೀಡಲು ತಡಬಡಾಯಿಸಿದರು. ಕುಪಿತಗೊಂಡ ಶಾಸಕ ಸರ್ಕಾರಿ ನಿಯಮಗಳು ನಿಮಗೆ ಗೊತ್ತಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

    ಖಾಲಿ ಶಿಕ್ಷಕ ಹುದ್ದೆಗಳ ಭರ್ತಿಗೆ ಮನವಿ: ಬಾಗೇಪಲ್ಲಿ ತಾಲೂಕು ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ 721 ಕಾಯಂ ಶಿಕ್ಷರ ಹುದ್ದೆಗಳಿದ್ದು, 279 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 22 ಸರ್ಕಾರಿ ಶಾಲೆಗಳಲ್ಲಿ ಶಿಕ್ಷರ ಕೊರತೆ ಇದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಶಿಕ್ಷಕರ ಭರ್ತಿಗೆ ಮುಂದಾಗಬೇಕೆಂದು ಬಿಇಒ ಸಿದ್ದಪ್ಪ ಶಾಸಕರಲ್ಲಿ ಮನವಿ ವಾಡಿದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಶಾಸಕರು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts