ಪಯಸ್ವಿನಿ ನದಿಗೆ ಬಾಗಿನ ಅರ್ಪಣೆ

New Project (4)
Published on

ಸುಳ್ಯ: ವಿಶ್ವ ಜಲ ದಿನದ ಅಂಗವಾಗಿ ಸುಳ್ಯದ ಜೀವನದಿ ಪಯಸ್ವಿನಿಗೆ ಆರತಿ ಬೆಳಗಿ ಬಾಗಿನ ಅರ್ಪಿಸಿ ನಮಿಸಲಾಯಿತು. ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರ ನೇತೃತ್ವದಲ್ಲಿ ಪಯಸ್ವಿನಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮ ನಡೆಸಲಾಯಿತು. ಸುಳ್ಯದ ಎಲ್ಲ ಜನತೆಗೆ ಕುಡಿಯುವ ನೀರಿಗೆ, ಉತ್ತಮ ಮಳೆ-ಬೆಳೆ ಆಗುವ ಮೂಲಕ ಸಮೃದ್ಧಿಯಾಗುವಂತೆ ಪ್ರಾರ್ಥಿಸಲಾಯಿತು. ವಿಶೇಷವಾಗಿ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರು ಪಾಲ್ಗೊಂಡು ಸೌಹಾರ್ದ ಕಾರ್ಯಕ್ರಮ ನಡೆಯಿತು.

ನಾಗಪಟ್ಟಣ ದೇವಸ್ಥಾನದ ಅರ್ಚಕ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ., ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಎಂ.ಎಚ್., ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net