21.7 C
Bengaluru
Tuesday, January 21, 2020

ಬಾಹುಬಲಿಯ ತ್ಯಾಗ ಶ್ರೇಷ್ಠ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಧರ್ಮಸ್ಥಳ: ತ್ಯಾಗದ ಮೂಲಕ ಬದುಕಿನಲ್ಲಿ ಅಮರತ್ವ ಪಡೆಯುವುದು ನಮ್ಮ ದೇಶದ ಮಣ್ಣಿನ ದೊಡ್ಡ ಗುಣ. ಆದ್ದರಿಂದ ಬಾಹುಬಲಿಯ ತ್ಯಾಗವನ್ನು ಶ್ರೇಷ್ಠ ಮಟ್ಟದಲ್ಲಿ ವರ್ಣಿಸಲಾಗಿದೆ. ವಿರಕ್ತ ಮೂರ್ತಿ ಬಾಹುಬಲಿ ದೊಡ್ಡ ಸಾಧನೆಯ ಸಂಕೇತವಾಗಿ ಕಾಣಬಹುದು ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ಭಾನುವಾರ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾದ ಜನಮಂಗಲ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಜೈನ ಧರ್ಮದಲ್ಲಿ ಅಹಿಂಸೆಗೆ ದೊಡ್ಡ ಮಹತ್ವವಿದೆ. ಅಹಿಂಸಾ ಮಾರ್ಗದ ಮೂಲಕ ಜೈನಧರ್ಮದ ಎಲ್ಲ ಧರ್ಮಗಳ ಮೇಲೆ ತನ್ನ ಪ್ರಭಾವ ಬೀರಿದೆ ಎಂದರು.
ಶ್ರೀ ವಾತ್ಸಲ್ಯವಾರಿಧಿ 108 ಪುಷ್ಪದಂತ ಸಾಗರ ಮುನಿಮಹಾರಾಜ್ ಆಶೀರ್ವಚನ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ರಮಾನಾಥ ರೈ, ಮಸ್ತಕಾಭಿಷೇಕ ಸಮಿತಿ ಪ್ರಧಾನ ಸಂಚಾಲಕ ಡಿ.ಸುರೇಂದ್ರ ಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಜನಾರ್ದನ್, ಸಂಪತ್ ಸಾಮ್ರಾಜ್ಯ ಉಪಸ್ಥಿತರಿದ್ದರು.
ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್ ಸ್ವಾಗತಿಸಿ, ಡಾ.ಜಯಕುಮಾರ್ ಶೆಟ್ಟಿ ವಂದಿಸಿದರು. ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ಕಲಿಯುಗದ ಬೆಳಕು: ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, 1981ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ ಮಹಾಮಸ್ತಕಾಭಿಷೇಕ ವೇಳೆ ವಿದ್ಯಾನಂದ ಮುನಿ ಮಹಾರಾಜರು, ಮಸ್ತಕಾಭಿಷೇಕಗಳು ಜನರಿಗೆ ಹಿತವಾಗುವ ಸಮಾಜಮುಖಿ ಕಾರ್ಯಕ್ರಮಗಳಾಗಬೇಕು ಎಂದು ಸೂಚಿಸಿದ್ದರು. ಅವರೇ ಜನಮಂಗಲ ಎಂದು ಹೆಸರು ನೀಡಿದ್ದರು. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರತಿ ಜಿಲ್ಲೆಯಿಂದ ಪ್ರತಿ ತಿಂಗಳು ವಾಸ್ತವಿಕ ವರದಿ ಪಡೆಯಲಾಗುತ್ತದೆ. ಅದರಲ್ಲಿ ದುರ್ಬಲರ ಕುರಿತ ಮಾಹಿತಿಯೂ ಇರುತ್ತದೆ. ಅದನ್ನು ನೋಡಿದ ಮೇಲೆ ಜನಮಂಗಲ ಕಾರ್ಯಕ್ರಮ ಆಯೋಜಿಸುವ ಉದ್ದೇಶ ಮಾಡಲಾಯಿತು. ಕಲಿಯುಗ ಕೆಟ್ಟದ್ದು ಹೌದಾದರೂ ಇದು ಶ್ರೀಸಾಮಾನ್ಯನಿಗೆ ಬೆಳಕು ತೋರಿಸಿದೆ ಎಂದರು.

ಅಶಕ್ತರಿಗೆ ಸಹಾಯ: ಜನಮಂಗಲ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಅಶಕ್ತರಿಗೆ ಸಹಾಯ ಮಾಡಲಾಗುತ್ತಿದೆ. ಇದಕ್ಕಾಗಿ 1.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ವೇ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗಿದೆ. 560 ಮಂದಿಗೆ 30 ಲಕ್ಷ ರೂ. ವೆಚ್ಚದಲ್ಲಿ ಗಾಲಿಕುರ್ಚಿ, 400 ಮಂದಿಗೆ ವಾಕರ್, 110 ಜನರಿಗೆ ವಾಕಿಂಗ್ ಸ್ಟಿಕ್ ಒದಗಿಸಲಾಗುತ್ತದೆ. ಸ್ವಸಹಾಯ ಸಂಘದ ಮೂಲಕ ಮಾ.31ವರೆಗೆ ರಿಕ್ಷಾ, ಟೆಂಪೋ ಟ್ಯಾಕ್ಸಿ ಲೋನ್ ಪಡೆಯುವವರಿಗೆ 10 ಸಾವಿರ ರೂ. ಅನುದಾನ ನೀಡಲಾಯಿತು. ಇಲ್ಲಿವರೆಗೆ 626 ಮಂದಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದು ಒಂದು ಸಾವಿರ ತಲುಪುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್ ಮಾಹಿತಿ ನೀಡಿದರು.

ಜಗತ್ತು ಕತ್ತಲಲ್ಲಿರುವಾಗ ಬಾಹುಬಲಿಯ ಸಂದೇಶ ಬೆಳಕಿನ ಕಿರಣವಾಗಿ ಕಾಣಿಸುತ್ತದೆ. ಈ ಬೆಳಕಿನ ಕಿರಣ ತೋರಿಸುವ ಕೆಲಸ ಧರ್ಮಸ್ಥಳದಲ್ಲಿ ಮಸ್ತಕಾಭಿಷೇಕ ಮೂಲಕ ನಡೆಯುತ್ತಿದೆ. ಉತ್ತರದಲ್ಲಿ ಮಹಾಕುಂಭಮೇಳ ದಕ್ಷಿಣದಲ್ಲಿ ಮಹಾಮಸ್ತಕಾಭಿಷೇಕ ನಡೆಯುವುದರೊಂದಿಗೆ ಜಗತ್ತಿಗೆ ಅಧ್ಯಾತ್ಮದ ಬೆಳಕು ತೋರಿಸುವ ಕೆಲಸ ನಡೆಯುತ್ತಿದೆ. ಇಂಥ ಕಾರ್ಯದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ಪುಣ್ಯ.
ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ, ಸಂಸದ

ಧರ್ಮಸ್ಥಳ ಕ್ಷೇತ್ರದಿಂದ ನಡೆಯುವ ಜನಮಂಗಲ ಕಾರ್ಯಕ್ರಮ ನೋಡಿ, ದೇವರು ಆನಂದಭಾಷ್ಪ ಸುರಿಸುತ್ತಿರಬಹುದು. ನಾವು ಮನುಷ್ಯರಾದರೆ ಇದೇ ರೀತಿ ಸೇವೆ ಸಲ್ಲಿಸಬಹುದಿತ್ತು ಅಂದುಕೊಳ್ಳುತ್ತಿರಬಹುದು. ದೇಶದ ಎಲ್ಲ ದೇವಸ್ಥಾನಗಳು ಜನರಿಗೆ ಸಹಾಯ ಹಸ್ತ ನೀಡಲು ಮುಂದಾಗಬೇಕು.
ಶ್ರೀ ವಾತ್ಸಲ್ಯವಾರಿಧಿ 108 ಪುಷ್ಪದಂತ ಸಾಗರ ಮುನಿಮಹಾರಾಜ್

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...