More

    ಐಎಎಸ್ ಅಧಿಕಾರಿ ಜೆ. ಮಂಜುನಾಥ್‌ಗೆ ಸದ್ಯ ಜೈಲೇ ಗತಿ; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

    ಪ್ರಕರಣದಲ್ಲಿ ಜಾಮೀನು ಕೋರಿ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಆರೋಪಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.

    ಇದರಿಂದ, ಜೆ.ಮಂಜುನಾಥ್‌ಗೆ ಮತ್ತಷ್ಟು ದಿನ ಜೈಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದ್ದು, ಜಾಮೀನಿಗಾಗಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆ ಇದೆ.

    ಪ್ರಕರಣವೇನು?: ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿದ್ದ ಪಿ.ಎಸ್.ಮಹೇಶ್ ಹಾಗೂ ಚೇತನ್ ಕುಮಾರ್ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಜು.4ರಂದು ಬಂಧನಕ್ಕೊಳಗಾಗಿರುವ ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಜು.11ರಂದು ವಜಾಗೊಳಿಸಿತ್ತು.

    ಮನವಿಯೇನು?: ಇದರಿಂದ, ಜು.19ರಂದು ಹೈಕೋರ್ಟ್ ಮೆಟ್ಟಿಲೇರಿದ್ದ ಮಂಜುನಾಥ್, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಲಂಚ ಸ್ವೀಕರಿಸಿದ ಸಂದರ್ಭದಲ್ಲಿ ನಾನು ಸ್ಥಳದಲ್ಲಿಯೂ ಇರಲಿಲ್ಲ. ಪ್ರಕರಣದ ಸಂಬಂಧ ಸಂಗ್ರಹಿಸಲಾಗಿರುವ ದಾಖಲೆಗಳೂ ಸಹ ದಾಳಿ ನಡೆಸಿದ ದಿನ ಅಥವಾ ಅದಕ್ಕೂ ಮೊದಲು ಯಾವುದೇ ಹಂತದಲ್ಲಿ ನಾನು ಹಣಕ್ಕಾಗಿ ಬೇಡಿಕೆ ಇಟ್ಟಿರುವುದನ್ನು ತೋರಿಸುತ್ತಿಲ್ಲ. ಕೆಲ ಬಾಹ್ಯ ಒತ್ತಡಗಳಿಂದ ತನಿಖಾಧಿಕಾರಿಗಳು ಹೆಚ್ಚುವರಿ ವರದಿ ಸಲ್ಲಿಸಿ, ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಇದು ನ್ಯಾಯಸಮ್ಮತವಲ್ಲ. ಆದ್ದರಿಂದ, ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

    ಪಿಎಸ್​ಐ ನೇಮಕಾತಿಗಾಗಿ ಶೀಘ್ರದಲ್ಲೇ ಮರುಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

    ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಇನ್ನಷ್ಟು ಜೋರು; ನಾಳೆ-ನಾಡಿದ್ದು ಕರಾವಳಿ-ಮಲೆನಾಡಲ್ಲಿ ರೆಡ್ ಅಲರ್ಟ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts